ಬೆಂಗಳೂರು : ಅ.3ರಂದು ಬೆಂಗಳೂರು ನಗರ ವಿವಿ ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ 2 ಮತ್ತು 3ನೇ ವಾರ್ಷಿಕ ಘಟಿಕೋತ್ಸವವನ್ನು ಆಯೋಜಿಸಲಾಗಿದ್ದು, ನಟಿ ಭಾರತಿ ವಿಷ್ಣುವರ್ಧನ್, ಲೇಖಕಿ ದು.ಸರಸ್ವತಿ ಸೇರಿದಂತೆ ಆರು ಮಂದಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಮಹಾರಾಣಿ ಕ್ಲಸ್ಟರ್ ವಿವಿ ಕುಲಪತಿ ಡಾ.ಟಿ.ಎಂ.ಮಂಜುನಾಥ್ ತಿಳಿಸಿದ್ದಾರೆ.
ಇದನ್ನೂ ಓದಿ : ಟ್ರೋಫಿ ಸ್ವೀಕರಿಸದಿರುವುದು ಕೇವಲ ನಾಟಕ: ಸಂಜಯ್ ರಾವತ್ ಟೀಕೆ
ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೋಮಿಯೋಪತಿ ವೈದ್ಯ ಡಾ.ಬಿ.ಟಿ. ರುದ್ರೇಶ್, ಶಿಕ್ಷಣ ತಜ್ಞೆ ಡಾ.ಎಚ್.ಎನ್.ಉಷಾ, ಬಯೋಕಾನ್ ಲಿಮಿಟೆಡ್‍ನ ಎಕ್ಸಿಕ್ಯೂಟಿವ್ ಸಂಸ್ಥಾಪಕ ಡಾ.ಕಿರಣ್ ಮಜುಂದಾರ್ ಷಾ, ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದನ್ನೂ ನೋಡಿ : ಧರ್ಮಸ್ಥಳ | ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿ ಧರ್ಮಾಧಿಕಾರಿಯ ಮೇಲಿದೆ – ಎಸ್ ಜಿ ಸಿದ್ದರಾಮಯ್ಯ Janashakthi
