ಬೆಂಗಳೂರು: ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಆಗಲಿದ್ದು, ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಹದಿನಾರು ಜಿಲ್ಲೆಗಳಿಗೆ ಸಿಎಂ ಯಡಿಯೂರಪ್ಪ ಅನ್‌ಲಾಕ್ ಘೋಷಣೆ ಮಾಡಿದ್ದಾರೆ. ಲಾಕ್‌ಡೌನ್ ಸಡಿಲಿಕೆ ಮಾಡುವ ಸಂಬಂಧ ಶನಿವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಸಭೆ ನಡೆಸಿದ ನಂತರ ಈ ಘೋಷಣೆ ಮಾಡಿದ್ದಾರೆ.
ಶೇ.5% ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಹದಿನಾರು ಜಿಲ್ಲೆಗಳಲ್ಲಿ, ಅಂದರೆ ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆ ಮಾಡಲಾಗಿದೆ. ಉಳಿದ 13 ಜಿಲ್ಲೆಗಳಲ್ಲಿ ಜೂನ್ 11ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರಿಕೆ: ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದ. ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ದಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ. ಶೇಕಡಾ10ಕ್ಕಿಂತಲೂ ಹೆಚ್ಚಿನ ಪಾಸಿಟಿವಿಟಿ ದರ ಹೆಚ್ಚಿರುವ ಮೈಸೂರಿನಲ್ಲಿ ಈಗಿರುವ ಲಾಕ್ ಡೌನ್ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ :ಶಿಕ್ಷಕರನ್ನು ಕೋವಿಡ್ ವಾರಿಯರ್ಸ್‌ಗಳೆಂದು ಪರಿಗಣಿಸಿ ವಿಮಾ ಸೌಲಭ್ಯ ನೀಡಿ : ರಾಷ್ಟ್ರೀಯ ಮಾನವ ಹಕ್ಕು ಆಯೋಗ
ರಾಜ್ಯಾದ್ಯಾಂತ ಜಾರಿ ಇರಲಿದೆ ನೈಟ್ ಕರ್ಫ್ಯೂ : ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಲಾಗಿದೆ.
ಯಾವುದಕ್ಕೆ ವಿನಾಯಿತಿ
- ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
- ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು. •
ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. - ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
- ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
- ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
- ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
- ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.