ದೆಹಲಿ: ದೇಶದ ಪರಿಸ್ಥಿತಿಯನ್ನು ಅವಲೋಕಿಸಿದರೆ ಸಾಮೂಹಿಕವಾಗಿ, ವಿವೇಚನೆಯಿಲ್ಲದ ಮತ್ತು ಅಪೂರ್ಣವಾದ ಅಭಿಯಾನದ ಮೂಲಕ ಕೋವಿಡ್ ಲಸಿಕೆಯನ್ನು ನೀಡಿದರೆ ರೂಪಾಂತರ ತಳಿಗಳ ಹೊರಹೊಮ್ಮುವಿಕೆಯನ್ನು ಪ್ರಚೋದಿಸುತ್ತದೆ ಎಂದು ಏಮ್ಸ್‌ನ ವೈದ್ಯರು, ಕೋವಿಡ್-19 ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರು, ಸಾರ್ವಜನಿಕ ಆರೋಗ್ಯ ತಜ್ಞರ ತಂಡ ವರದಿ ನೀಡಿದೆ.
‘ಎಲ್ಲರಿಗೂ ಒಂದೇ ಬಾರಿ ಲಸಿಕೆ ನೀಡುವುದರಿಂದ ಮಾನವ ಮತ್ತು ಇತರ ಸಂಪನ್ಮೂಲಗಳು ಬರಿದಾಗುತ್ತವೆ,’ ಎಂದು ತಜ್ಞರು ವರದಿಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದಾರೆ.
ಇದನ್ನು ಓದಿ: ಸಮಾಜವಾದ ಮಾತ್ರವೇ ಮೋದಿಯನ್ನು ಸೋಲಿಸಬಲ್ಲದು
ಕೊರೊನಾ ವೈರಸ್ ಸೋಂಕಿಗೆ ಒಳಗಾದವರಿಗೆ ಲಸಿಕೆ ಹಾಕುವ ಅಗತ್ಯವಿಲ್ಲ ಎಂದೂ ತಜ್ಞರು ಸಲಹೆ ನೀಡಿದ್ದು, ಮಕ್ಕಳು ಮತ್ತು ದೊಡ್ಡ ಜನಸಮುದಾಯಕ್ಕೆ ಲಸಿಕೆ ನೀಡುವ ಬದಲು ದುರ್ಬಲರು ಮತ್ತು ಸೋಂಕಿನ ಅಪಾಯ ಇರುವವರಿಗೆ ಮೊದಲು ಲಸಿಕೆ ನೀಡಬೇಕು. ಸದ್ಯ ಇದೇ ಮೊದಲ ಆದ್ಯತೆಯಾಗಬೇಕದಿ ಎಂದು ಭಾರತೀಯ ಸಾರ್ವಜನಿಕ ಆರೋಗ್ಯ ಸಂಸ್ಥೆ (ಐಪಿಎಚ್‌ಎ), ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ಸಂಘ (ಐಎಇ) ಮತ್ತು ‘ಇಂಡಿಯನ್ ಅಸೋಸಿಯೇಷನ್ ಆಫ್ ಪ್ರಿವೆಂಟಿವ್ ಅಂಡ್ ಸೋಶಿಯಲ್ ಮೆಡಿಸಿನ್’ (ಐಎಪಿಎಸ್ಎಂ)ನ ತಜ್ಞರು ವರದಿಯನ್ನು ನೀಡಿದ್ದಾರೆ.
ಎಲ್ಲಾ ವಯೋಮಾನದವರಿಗೆ ಲಸಿಕೆ ಹಾಕುವುದಕ್ಕೆ ಬದಲಾಗಿ ಸಾಂಕ್ರಾಮಿಕ ರೋಗದ ಅಧ್ಯಯನದ ವರದಿಗಳು ಮತ್ತು ರೋಗದ ವಿರುದ್ಧ ಸೆಣಸುತ್ತಿರುವವರ ಮಾರ್ಗದರ್ಶನ ಪಡೆದು ಲಸಿಕೆ ಅಭಿಯಾನ ಕೈಗೊಳ್ಳಬೇಕು. ದೇಶದಲ್ಲಿ ಸದ್ಯ ಇದೆ ಆದ್ಯತೆಯಾಗಬೇಕಿದೆ. ಸಾಮೂಹಿಕವಾಗಿ ಲಸಿಕೆ ಕಾರ್ಯಕ್ರಮ ಕೈಗೊಂಡದರೆ ಸೋಂಕು ಹರಡುವ ಸಾಧ್ಯತೆಯೆ ಹೆಚ್ಚಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಇದನ್ನು ಓದಿ: ಕೋವಿಡ್ ಹೊಸ ಪ್ರಕರಣ ದಾಖಲಾತಿ ಕಡಿಮೆಯಾದರೂ ಸಾವಿನ ಸಂಖ್ಯೆ ಅಧಿಕಗೊಳ್ಳುತ್ತಿದೆ
‘ವಯಸ್ಕರಿಗೆ ಮತ್ತು ಮಕ್ಕಳಿಗೆ ಲಸಿಕೆ ನೀಡಲೇ ಬೇಕೆಂಬ ವೈಜ್ಞಾನಿಕ ಸಾಕ್ಷ್ಯಗಳಿಲ್ಲ. ಯೋಜಿತವಲ್ಲದ ಲಸಿಕೀಕರಣವು ರೂಪಾಂತರ ತಳಿಗಳ ಸೃಷ್ಟಿಯನ್ನು ಉತ್ತೇಜಿಸುತ್ತವೆ. ದೇಶದ ವಿವಿದೆಡೆ ಸದ್ಯ ತ್ವರಿತವಾಗಿ ಹರಡುತ್ತಿರುವ ಕೋವಿಡ್ ಸೋಂಕನ್ನು ತಡೆಯಲು ಲಸಿಕೆ ಅಭಿಯಾನವೇ ಅದ್ಯತೆಯಲ್ಲ’ ಎಂದು ವರದಿಯಲ್ಲಿ ಹೇಳಲಾಗಿದೆ.
‘ಕೊರೊನಾ ವೈರಸ್‌ನ ಸೋಂಕಿಗೆ ಒಳಗಾದವರಿಗೆ ಲಸಿಕೆ ನೀಡುವ ಅಗತ್ಯವಿಲ್ಲ. ನೈಸರ್ಗಿಕವಾಗಿ ಸೋಂಕುಗೊಂಡ ನಂತರ ಲಸಿಕೆ ಪ್ರಯೋಜನಕಾರಿ ಎಂಬುದಕ್ಕೆ ಪುರಾವೆಗಳು ಲಭ್ಯವಾದ ನಂತರ ಈ ಜನರಿಗೆ ಲಸಿಕೆ ನೀಡಬಹುದು,’ ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಪರಿಣಾಮವಾಗಿ ಸಾವಿನ ಪ್ರಮಾಣ ಹೆಚ್ಚಾಗುತ್ತಿವೆ. ಸಾವಿನ ಪ್ರಮಾಣವನ್ನು ಕಡಿಮೆ ಮಾಡುವುದೇ ಪ್ರಮುಖ ಆದ್ಯತೆಯಾಗಬೇಕಿದೆ. ಹೀಗಾಗಿ ಎರಡನೇ ಅಲೆ ಕೊನೆಗೊಳ್ಳುತ್ತಿದ್ದಂತೆ ಸ್ಥಳೀಯ ಮಟ್ಟದಲ್ಲಿ ಸೆರೋ ಸರ್ವೆಗಳನ್ನು ನಡೆಸಬೇಕಾಗಿದೆ. ಇದಕ್ಕಾಗಿ ಒಂದು ಕಾರ್ಯಸೂಚಿ ತರುವುದು ಮತ್ತು ಕೊರೊನಾ ನಿಯಂತ್ರಣ ಮಾಡಲು ಸಹಕಾರಿಸಬೇಕಿದೆ ಎಂದು ಹೇಳಿದ್ದಾರೆ.