ನವದೆಹಲಿ |ಸೆಂಗಾರ್​ಗೆ ಜೀವಾವಧಿ ಶಿಕ್ಷೆಯನ್ನು ಗಲ್ಲಿಗೇರಿಸುವವರೆಗೂ ನಾನು ಇಲ್ಲಿಂದ ಜಾಗ ಖಾಲಿ ಮಾಡಲ್ಲ

ನವದೆಹಲಿ: ಅಪರಾಧಿ ಸೆಂಗಾರ್​ಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದನ್ನು ಸ್ವಾಗತಿಸಿದ್ದಾರೆ. ಕುಲದೀಪ್ ಸೆಂಗಾರ್​ನನ್ನು ಗಲ್ಲಿಗೇರಿಸುವವರೆಗೂ ನಾನು ವಿಶ್ರಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸೆಂಗಾರ್‌ಗೆ ನೋಟಿಸ್ ಜಾರಿ ಮಾಡಿ, ಪ್ರತಿಕ್ರಿಯಿಸುವಂತೆ ನಿರ್ದೇಶಿಸಿದೆ.

ಇದನ್ನೂ ಓದಿ : ನವದೆಹಲಿ | ಡಿ. 31 ರಂದು ಮುಷ್ಕರಕ್ಕೆ ಕರೆ ನೀಡಿದ ಗಿಗ್‌ ಕೆಲಸಗಾರು

ನಾನು ಯಾವುದೇ ನ್ಯಾಯಾಲಯದ ವಿರುದ್ಧ ಆರೋಪಗಳನ್ನು ಮಾಡುವುದಿಲ್ಲ ಎಂದು ಸಂತ್ರಸ್ತೆ ಹೇಳಿದರು. “ಈ ತೀರ್ಪಿನಿಂದ ನನಗೆ ತುಂಬಾ ಸಂತೋಷವಾಗಿದೆ. ಸುಪ್ರೀಂ ಕೋರ್ಟ್‌ನಿಂದ ನನಗೆ ನ್ಯಾಯ ಸಿಕ್ಕಿದೆ. ನಾನು ಮೊದಲಿನಿಂದಲೂ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದೇನೆ ಎಂದರು.

ಆತನನ್ನು ಗಲ್ಲಿಗೇರಿಸುವವರೆಗೂ ನಾನು ವಿಶ್ರಮಿಸುವುದಿಲ್ಲ. ನಾನು ಹೋರಾಟ ಮುಂದುವರಿಸುತ್ತೇನೆ. ಆಗ ಮಾತ್ರ ನನ್ನ ಕುಟುಂಬ ಮತ್ತು ನನಗೆ ನ್ಯಾಯ ಸಿಗುತ್ತದೆ. ನನಗೆ ಎಲ್ಲಾ ನ್ಯಾಯಾಲಯಗಳ ಮೇಲೆ ನಂಬಿಕೆ ಇದೆ. ಆದರೆ ಸುಪ್ರೀಂ ಕೋರ್ಟ್ ನನಗೆ ನ್ಯಾಯ ನೀಡಿದೆ ಮತ್ತು ಅದನ್ನು ಮುಂದುವರಿಸುತ್ತದೆ.  ಇಂದಿಗೂ ನಮಗೆ ಬೆದರಿಕೆಗಳು ಬರುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ಸುಪ್ರೀಂ ಕೋರ್ಟ್‌ ತೀರ್ಪನ್ನು ಸಂತ್ರಸ್ತೆಯ ಕುಟುಂಬಸ್ಥರು ಸ್ವಾಗತಿಸಿದ್ದು, ನ್ಯಾಯ ವ್ಯವಸ್ಥೆಯಲ್ಲಿನ ತಮ್ಮ ನಂಬಿಕೆಯನ್ನು ಪುನಃಸ್ಥಾಪಿಸಲಾಗಿದೆ. ಆರೋಪಿಯನ್ನು ಬಿಡುಗಡೆ ಮಾಡದಂತೆ ನ್ಯಾಯಾಲಯ ತೀರ್ಪು ನೀಡುತ್ತದೆ ಎಂಬ ಸಂಪೂರ್ಣ ನಂಬಿಕೆ ಇದೆ ಎಂದು ಸಂತ್ರಸ್ತೆಯ ಸಹೋದರಿ ತಿಳಿಸಿದರು.

ಇಂದು ನನಗೆ ಸಂತಸವಾಗಿದೆ. ಅವನ ಜಾಮೀನು ತಿರಸ್ಕೃತವಾಗಬೇಕು. ಅವನೊಬ್ಬ ರಾಕ್ಷಸ. ಮೊದಲು ಅವನು ನನ್ನ ಸಹೋದರಿಯ ಮೇಲೆ ಅತ್ಯಾಚಾರ ಮಾಡಿ ನಂತರ ಇಡೀ ಕುಟುಂಬವನ್ನೇ ನಾಶ ಮಾಡಿದ. ನಮ್ಮ ಕುಟುಂಬವು ಪ್ರಕರಣವನ್ನು ಮುಂದುವರಿಸುತ್ತದೆ ಎಂದು ಹೇಳಿದರು.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ರಜಾಕಾಲದ ಪೀಠವು, ಡಿಸೆಂಬರ್ 23ರ ಹೈಕೋರ್ಟ್ ಆದೇಶದಂತೆ ಸೆಂಗಾರ್ ಅವರನ್ನು ಬಂಧನದಿಂದ ಬಿಡುಗಡೆ ಮಾಡಬಾರದು ಎಂದು ಹೇಳಿದೆ.

ಇದನ್ನೂ ನೋಡಿ : ಕುವೆಂಪು ಜನ್ಮ ದಿನ | ಮಾನವನ ಮನಸ್ಸು ಶ್ರೀಮಂತವಾಗಬೇಕಾದರೆ ಕುವೆಂಪುರನ್ನು ಓದಬೇಕು – ಡಾ. ಬಿ.ಆರ್.‌ ಮಂಜುನಾಥ್‌

Donate Janashakthi Media

Leave a Reply

Your email address will not be published. Required fields are marked *