ಡಿಯೋರಿಯಾ: ಪ್ರಥಮ ವರ್ಷದ ಬಿಎ ವಿದ್ಯಾರ್ಥಿನಿಯೊಬ್ಬರನ್ನು ಮೂವರು ದುಷ್ಕರ್ಮಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಯುವತಿಯು ಜಿಲ್ಲೆಯ ಬರ್ಹಾಜ್ ನಗರದಲ್ಲಿರುವ ಕಾಲೇಜಿಗೆ ತೆರಳಿ ಅಲ್ಲಿಂದ ಮದನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದಕ್ಕೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಯುವತಿಯ ತಾಯಿಯ ದೂರಿನ ಆಧಾರದ ಮೇಲೆ ಸಂಬಂಧಿತ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಲಾಗಿದೆ. ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಡಿಯೋರಿಯಾ ಎಎಸ್ಪಿ ರಾಜೇಶ್ ಕುಮಾರ್ ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಹಿಂದುತ್ವದ ಗೆಲುವಿಗೆ ವಾಟ್ಸ್ ಆ್ಯಪ್ ಅಪಪ್ರಚಾರ:ಬಿಜೆಪಿ ಐಟಿ ವಿಂಗ್ ಸಂಚು!
ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಬರ್ಹಾಜ್‌ನ ಸರ್ಕಲ್ ಆಫೀಸರ್ ಅಂಶುಮಾನ್ ಶ್ರೀವಾಸ್ತವ ತಿಳಿಸಿದ್ದಾರೆ. ಪೊಲೀಸರು ಸಮೀಪದ ಪ್ರದೇಶಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗೆ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಾಮೂಹಿಕ ಅತ್ಯಾಚಾರವನ್ನು ಖಚಿತಪಡಿಸಲು ಸಂತ್ರಸ್ತೆಯ ವೈದ್ಯಕೀಯ ವರದಿ ಇನ್ನೂ ಬಂದಿಲ್ಲ ಎಂದು ಶ್ರೀವಾಸ್ತವ ಉಲ್ಲೇಖಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಪೊಲೀಸ್ ತಂಡಗಳನ್ನು ಒಟ್ಟುಗೂಡಿಸಲಾಗಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಲು ಮಹಿಳಾ ಕಾನ್‌ಸ್ಟೆಬಲ್ ಅನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವಿಡಿಯೊ ನೋಡಿ: ಬಾಪು ಮತ್ತೆ ಮತ್ತೆ ನೀ ನೆನಪಾಗುತ್ತೀದ್ದಿಯಾ – ಕೆ.ಮಹಾಂತೇಶ್‌ರವರ ಕವಿತೆ Janashakthi Media