ಉತ್ತರ ಪ್ರದೇಶ | ಅಕ್ರಮ ಸಂಬಂಧ ಆರೋಪಿಸಿ ಕಂಬಕ್ಕೆ ಕಟ್ಟಿ ವಿಧವೆಗೆ ಥಳಿತ

ಮಹಾರಾಜಗಂಜ್: ಉತ್ತರ ಪ್ರದೇಶದಲ್ಲಿ ವಿಧವೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. ಮಂಗಳವಾರದಂದು ತನ್ನ ಪ್ರಿಯಕರನೊಂದಿಗೆ ತೆರಳಿದ್ದ ಮಹಿಳೆ ಗ್ರಾಮಕ್ಕೆ ಮರಳಿದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯು ಮಹಾರಾಜಗಂಜ್‌ನ ಫರೇಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಭಾರಿವೈಸಿಯಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಾಗಿ ಆರೋಪಿಸಿ ಮಹಿಳೆಯನ್ನು ಆಕೆಯ ಸಂಬಂಧಿಕರು ಥಳಿಸಿದ್ದಾರೆ ಎಂದು ಸರ್ಕಲ್ ಆಫೀಸರ್ ಫಾರೆಂದಾ ಅನುಜ್ ಕುಮಾರ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶ

ಇದನ್ನೂ ಓದಿ: ಸಂಸತ್ ಭವನ ಅಲ್ಲ, ‘ಸಸ್ಪೆಂಡ್ ಭವನ’ | ಒಟ್ಟು 141 ಸಂಸದರು ಅಮಾನತು!

ತಮ್ಮನ್ನು ಬಿಟ್ಟು ಬಿಡುವಂತೆ ಮನವಿ ಮಾಡಿದರೂ ಉದ್ರಿಕ್ತರಾಗಿದ್ದ ಗ್ರಾಮಸ್ಥರು ಕ್ಯಾಂಪಿಯರ್‌ಗಂಜ್-ಮೋಡಿಗಂಜ್ ರಸ್ತೆಯ ಬಳಿ ಇಬ್ಬರನ್ನೂ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಕಾರ್ಯಾಚರಣೆಗಿಳಿದಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ವಿಧವೆ ಮಹಿಳೆಯು ಐದು ಮಕ್ಕಳ ತಾಯಿಯಾಗಿದ್ದು, ಬೇರೆ ಪುರುಷನೊಂದಿಗೆ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಅವರ ಮೇಲೆ ಕೋಪಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಜನಸಾಮಾನ್ಯರ ನಡಿಗೆ ಅಭಿವೃದ್ಧಿಯ ಕಡೆಗೆ : ತುಳುನಾಡಿನ ದುಸ್ಥಿತಿಗೆ 3 ದಶಕಗಳ ಬಿಜೆಪಿಯ ದುರಾಡಳಿತವೇ ಕಾರಣ

Donate Janashakthi Media

Leave a Reply

Your email address will not be published. Required fields are marked *