ಸಾಂವಿಧಾನಿಕ ಜವಾಬ್ದಾರಿಯನ್ನು ಎತ್ತಿಹಿಡಿಯಲು ಆಹ್ವಾನ ನಿರಾಕರಣೆ – ಸಿಎಂ ಪಿಣರಾಯಿ ವಿಜಯನ್ ಪುನರುಚ್ಛಾರ

ತಿರುವನಂತಪುರಂ: ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, “ನಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಎತ್ತಿಹಿಡಿಯುವುದಕ್ಕಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸುವ ಮೂಲಕ ಸಂವಿಧಾನದ ಜಾತ್ಯತೀತ ಸ್ವರೂಪಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ” ಎಂದು ಹೇಳಿದ್ದಾರೆ. ಧರ್ಮವು ಖಾಸಗಿ ವಿಷಯವಾಗಿದ್ದು, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಎಲ್ಲಾ ವ್ಯಕ್ತಿಗಳು ಸಮಾನವಾಗಿ ಅರ್ಹರು ಎಂದು ಸಂವಿಧಾನವು ಹೇಳಿದೆ ಎಂದು ಸೋಮವಾರ ಹೇಳಿದ್ದಾರೆ.

ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಧಾರ್ಮಿಕ, ಭಾಷಿಕ, ಪ್ರಾದೇಶಿಕ ಮತ್ತು ಪ್ರತ್ಯೇಕತೆಯ ವೈವಿಧ್ಯತೆಗಳನ್ನು ಮೀರಿ ಭಾರತದ ಎಲ್ಲ ಜನರ ನಡುವೆ ಸಾಮರಸ್ಯ ಮತ್ತು ಸಹೋದರತ್ವದ ಮನೋಭಾವವನ್ನು ಉತ್ತೇಜಿಸಲು ಅವರು ದೇಶದ ಜನರಿಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ದಲಿತ ಎಂಬ ಕಾರಣಕ್ಕೆ ಹೋಟೆಲ್‌ನಲ್ಲಿ ಊಟ ನಿರಾಕರಣೆ

“ಜಾತ್ಯತೀತತೆ ದೇಶದ ಆತ್ಮವಾಗಿದ್ದು, ಇದು ನಮ್ಮ ದೇಶದ ಸ್ವಾತಂತ್ರ್ಯ ಚಳವಳಿಯ ದಿನಗಳಿಂದಲೂ ನಮ್ಮ ಅಸ್ಮಿತೆಯ ಒಂದು ಭಾಗವಾಗಿದೆ. ವಿವಿಧ ರಾಜ್ಯಗಳಿಗೆ ಸೇರಿದವರು ಮತ್ತು ಯಾವುದೇ ಧರ್ಮದ ಭಾಗವಲ್ಲದವರು ಕೂಡಾ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಈ ರಾಷ್ಟ್ರವು ಎಲ್ಲಾ ಜನರಿಗೆ ಮತ್ತು ಭಾರತೀಯ ಸಮಾಜದ ಎಲ್ಲಾ ವರ್ಗಗಳಿಗೆ ಸಮಾನವಾಗಿ ಸೇರಿದೆ” ಎಂದು ಅವರು ಹೇಳಿದ್ದಾರೆ.

ಸಂವಿಧಾನವನ್ನು ಎತ್ತಿಹಿಡಿಯಲು ಪ್ರಮಾಣ ವಚನ ಸ್ವೀಕರಿಸಿದವರಾಗಿ, ನಮ್ಮ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಈ ಹಕ್ಕುಗಳನ್ನು ಅನುಭವಿಸುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ಎಲ್ಲರ ಮೇಲೆ ಒಂದು ಧರ್ಮವನ್ನು ಪ್ರಚಾರ ಮಾಡಲು ಸಾಧ್ಯವಿಲ್ಲ ಎಂದು ವಿಜಯನ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಪ್ರತಿ ಚುನಾವಣೆಗೆ ರಾಜಕೀಯ ಅಜೆಂಡಾ ಬದಲಾಯಿಸುತ್ತಾರೆ; ಶಶಿ ತರೂರ್

ಭಾರತೀಯ ಜಾತ್ಯತೀತತೆಯಲ್ಲಿ ಧರ್ಮ ಮತ್ತು ರಾಜ್ಯವನ್ನು ಬೇರ್ಪಡಿಸುವ ಬಗ್ಗೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಮಾತುಗಳನ್ನು ನೆನಪಿಸಿಕೊಂಡ ಕೇರಳ ಮುಖ್ಯಮಂತ್ರಿ, ದೇಶವು ಆ ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳುವ ಸಂಪ್ರದಾಯವನ್ನು ಹೊಂದಿದೆ ಆದರೆ ಅದನ್ನು ಗುರುತಿಸುವ ರೇಖೆಯು ತೆಳುವಾಗುತ್ತಿದೆ ಎಂದು ಹೇಳಿದ್ದಾರೆ.

“ಪಸ್ತುತ ದೇಶದಲ್ಲಿ ಧಾರ್ಮಿಕ ಪೂಜಾ ಸ್ಥಳದ ಉದ್ಘಾಟನೆಯನ್ನು ದೇಶದ ಉತ್ಸವದ ರೀತಿಯಲ್ಲಿ ಆಚರಿಸಲಾಗುತ್ತಿದೆ. ಅದರ ಉಸ್ತುವಾರಿ ವಹಿಸಿರುವ ಟ್ರಸ್ಟ್‌ನಿಂದ ನಮ್ಮಲ್ಲಿ ಹೆಚ್ಚಿನವರಿಗೆ ಆಚರಣೆಗಳಲ್ಲಿ ಭಾಗವಹಿಸಲು ಆಹ್ವಾನ ಬಂದಿದೆ. ನಮ್ಮ ಸಂವಿಧಾನವನ್ನು ಸಂರಕ್ಷಿಸಲು ಮತ್ತು ರಕ್ಷಿಸಲು ಪಣ ತೊಟ್ಟವರಾಗಿ, ನಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಎತ್ತಿಹಿಡಿಯುವುದಕ್ಕಾಗಿ, ಈ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸುವ ಮೂಲಕ ಸಂವಿಧಾನದ ಜಾತ್ಯತೀತ ಸ್ವರೂಪಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ವಿಡಿಯೋ ನೋಡಿ: ಪ್ರಧಾನಿ ಮೋದಿಯವರ ‘ರಾಮಜಪ’ ರಾಜಕಾರಣ ಭಾರತವನ್ನು ಎಲ್ಲಿಗೆ ಕೊಂಡೊಯ್ಯುತ್ತಿದೆ? Janashakthi Media

Donate Janashakthi Media

Leave a Reply

Your email address will not be published. Required fields are marked *