ಬೈಕ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಚಾಕುವಿನಿಂದ ಹಲ್ಲೆ ನಡೆಸಿದ ವಿದ್ಯಾರ್ಥಿಗಳು

Please follow and like us:
ಬೆಂಗಳೂರು: ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ, ವಿದ್ಯಾರ್ಥಿಗಳ ನಡುವಿನ ಗಲಾಟೆಯಾಗಿದ್ದು, ಮೂವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಮತ್ತೋರ್ವನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಆಸ್ತಿ ಕೇಳಿದ ಅಕ್ಕನನ್ನು ಮನೆಯಿಂದ ಹೊರಹಾಕಿದ ಕ್ರೂರಿ ತಮ್ಮ

ಎಸ್, ನಗರದ ರಾಜಾನುಕುಂಟೆ ಬಳಿಯ ಖಾಸಗಿ ಕಾಲೇಜಿನಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ವಿದ್ಯಾರ್ಥಿಗಳ ನಡುವಿನ ಜಗಳ ಶುರುವಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿತ್ತು, ಮೂವರಿಗೆ ಚಾಕುವಿನಿಂದ ಇರಿತವಾಗಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ನೋಡಿ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *