ಬೆಂಗಳೂರು : 2021-22ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಿಂದ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್ ಎಸ್ ಸಿ ಮತ್ತು ಆರ್ ಆರ್ ಬಿ ಪರೀಕ್ಷೆಗಳ ಪೂರ್ವಭಾವಿ ಉಚಿತ ತರಬೇತಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು, 2020-21ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳನ್ನು ಆನ್ ಲೈನ್, ಆಫ್ ಲೈನ್ ಮೂಲಕ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್ ಎಸ್ ಸಿ ಮತ್ತು ಆರ್ ಆರ್ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್ ಎಸ್ ಸಿ ಮತ್ತು ಆರ್ ಆರ್ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳನ್ನು ಕೋವಿಡ್-19 ಹಿನ್ನಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ, ಆಯ್ಕೆ ಮಾಡಲು ಸಾಧ್ಯವಾಗದ ಕಾರಣ, ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಾಜರಾತಿಯನ್ವಯ ವರ್ಗಾಯಿಸಲಾಗುವುದು.
ಇಂತಹ ಯುಪಿಎಸ್ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿಂಗ್, ಎಸ್ ಎಸ್ ಸಿ ಮತ್ತು ಆರ್ ಆರ್ ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಬಯಸುವಂತ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳು ದಿನಾಂಕ 31-12-2020ರ ಸಂಜೆ 5.30ರ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಿದೆ