ಇರಾನ್ ಮತ್ತು ಯು. ಎಸ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಅಮೆರಿಕದ ಸೇನೆ ಇರಾನ್‌ನ ಕೆಲವು ಸೇನಾ ಗುರಿಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಹೋರ್ಮುಜ್ ಜಲಸಂಧಿ ಸಮೀಪ ಅಮೆರಿಕದ ಅಪಾಚೆ ಹೆಲಿಕಾಪ್ಟರ್ ಪತನಗೊಂಡ ಘಟನೆಯ ನಂತರ ಈ ದಾಳಿ ನಡೆದಿದೆ ಎಂದು ಅಮೆರಿಕ ಸೇನೆ ತಿಳಿಸಿದೆ. ಇರಾನ್
ಯುಎಸ್ ದಾಳಿಯಲ್ಲಿ ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಕೇಂದ್ರಗಳು ಹಾಗೂ ಸೇನಾ ಮೂಲಸೌಕರ್ಯಗಳನ್ನು ಗುರಿಯಾಗಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಕ್ರಮವನ್ನು “ಆತ್ಮರಕ್ಷಣೆಗಾಗಿ ಕೈಗೊಂಡ ಪ್ರತಿದಾಳಿ” ಎಂದು ಸಮರ್ಥಿಸಿಕೊಂಡಿದ್ದಾರೆ.
ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಯುಎಸ್ ಸೇನಾ ನೆಲೆಗಳು ಮತ್ತು ಹಿತಾಸಕ್ತಿಗಳ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಘೋಷಿಸಿದೆ. ಬಹ್ರೇನ್, ಜೋರ್ಡಾನ್ ಮತ್ತು ಕುವೈತ್ ಪ್ರದೇಶಗಳಲ್ಲಿನ ಅಮೆರಿಕ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್
ಇದನ್ನೂ ನೋಡಿ : ಯುದ್ಧದಲ್ಲಿ ಸೋತ ಯು.ಎಸ್ ನ್ನು ಮಾತುಕತೆಯಲ್ಲಿ ಗೆಲ್ಲಲು ಬಿಡದ ಇರಾನ್ Janashakthi Media
ಈ ಬೆಳವಣಿಗೆಯಿಂದ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಆತಂಕ ಹೆಚ್ಚಿದ್ದು, ಜಾಗತಿಕ ತೈಲ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೋರ್ಮುಜ್ ಜಲಸಂಧಿಯು ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾಗಿರುವುದರಿಂದ ಅಲ್ಲಿನ ಉದ್ವಿಗ್ನತೆ ಜಾಗತಿಕ ಆರ್ಥಿಕತೆಯ ಮೇಲೂ ಪರಿಣಾಮ ಬೀರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ರಷ್ಯಾ ಮತ್ತು ಚೀನಾ ಸೇರಿದಂತೆ ಹಲವು ರಾಷ್ಟ್ರಗಳು ಎರಡೂ ದೇಶಗಳು ಸಂಯಮ ಪಾಲಿಸಿ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸದಂತೆ ಮನವಿ ಮಾಡಿವೆ. ರಾಜತಾಂತ್ರಿಕ ಮಾತುಕತೆಗಳ ಮೂಲಕ ಸಮಸ್ಯೆ ಬಗೆಹರಿಸಬೇಕೆಂಬ ಒತ್ತಾಯವೂ ಕೇಳಿಬಂದಿದೆ.
ಇದನ್ನು ಓದಿ : ಡಿಜಿಟಲ್ ಯುಗದಲ್ಲಿ ಯುವ ಜನಾಂಗದ ತಲ್ಲಣಗಳು
