ವಾಷಿಂಗ್ಟನ್: ನವದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಸೆ 7ರಿಂದ 10ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ವೇತಭವನವು ಮಂಗಳವಾರ ತಿಳಿಸಿದೆ.
ಶೃಂಗಸಭೆಯಲ್ಲಿ ಬೈಡನ್ ಅವರು ಜಿ-20 ಪಾಲುದಾರ ರಾಷ್ಟ್ರಗಳ ನಾಯಕರೊಂದಿಗೆ ಜಾಗತಿಕ ಸಮಸ್ಯೆಗಳನ್ನು ನಿಭಾಯಿಸುವ ಕುರಿತು ಜಂಟಿ ಪ್ರಯತ್ನಗಳು, ಹವಾಮಾನ ಬದಲಾವಣೆ ಶುದ್ಧ ಇಂಧನ ಪರಿವರ್ತನೆ,ಉಕ್ರೇನ್ ಸಂಘರ್ಷದಿಂದ ಉಂಟಾದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ತಗ್ಗಿಸುವಿಕೆಯ ಕುರಿತು ಚರ್ಚಿಸಲಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೆರಿನ್ ಜೀನ್ ಪಿಯರ್ ಅವರು ತಿಳಿಸಿದ್ದಾರೆ. ಜಾಗತಿ ಸವಾಲುಗಳನ್ನು ಎದುರಿಸುವುದು ಸೇರಿದಂತೆ ಬಡತನದ ವಿರುದ್ಧ ಹೋರಾಡಲು ವಿಶ್ವಬ್ಯಾಂಕ್ ಸೇರಿದಂತೆ ಬಹುಪಕ್ಷೀಯ ಅಭಿವೃದ್ದೀ ಬ್ಯಾಂಕ್‌ಗಳ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗಯೂ ಚರ್ಚಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ಜಿ-20 ಶೃಂಗಸಭೆಯ ನಡೆಯುವ ಕಾರಣದಿಂದಾಗಿ ದೆಹಲಿಯಲ್ಲಿ ಸೆ,ರಿಂದ 10ರವರೆಗೆ ಎಲ್ಲ ಖಾಸಗಿ ಮತ್ತು ಸರ್ಕಾರಿ ಕಚೇರಿಗಳು ಬ್ಯಾಂಕ್‌ಗಳು, ಮಾರುಕಟ್ಟೆಗಳು ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.