ಮಂಗಳೂರು: ನಗರದ ಹೊರವಲಯದ ಉಳ್ಳಾಲಬೈಲ್ ನಲ್ಲಿ ‘ಹಿಂದುಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ’ ಎಂಬ ಆಕ್ಷೇಪಾರ್ಹ ಬ್ಯಾನರುಗಳನ್ನು ಅಳವಡಿಕೆ ಮಾಡಲಾಗಿದೆ.
ಈ ನೆಲದ ದೈವ, ದೇವರುಗಳನ್ನು ಪೂಜಿಸುವವರಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದಿಂದ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಜಾತ್ರೆ, ನೇಮ, ಉತ್ಸವಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಿರಲು ಕರೆ ನೀಡಲಾಗಿದೆ.
ಇಂತಹ ಬ್ಯಾನರುಗಳನ್ನು ಮಾಡುವವರ ಮೇಲೆಯೂ ಕ್ರಮಕೈಗೊಳ್ಳುವಂತೆ ಒತ್ತಾಯಿಸಿರುವ ಮಾಜಿ ಶಾಸಕ ಯು.ಟಿ.ಖಾದರ್, ಬ್ಯಾನರ್ ಪ್ರಿಂಟ್ ಮಾಡುವವರ ಮೇಲೆ ಮೊದಲು ಕೇಸ್ ದಾಖಲಿಸಬೇಕು ಎಂದು ಕಿಡಿಕಾರಿದ್ದಾರೆ.
ಆದರೆ ಬ್ಯಾನರ್ ಅಳವಡಿಕೆಯನ್ನು ದಕ್ಷಿಣ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸಮರ್ಥಿಸಿಕೊಂಡಿದ್ದು, ಕಾರ್ಯಕರ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವೆ ಎಂದು ತಿಳಿಸಿದ್ದಾರೆ.
ಬ್ಯಾನರ್ ಪ್ರಿಂಟ್ ಮಾಡಿದವರ ವಿರುದ್ದ ಕ್ರಮಕೈಗೊಳ್ಳಿ ಎಂದು ಯು.ಟಿ. ಖಾದರ್ ಕಿಡಿಕಾರಿದ್ದಾರೆ. ಪ್ರತಿವರ್ಷ ಉಳ್ಳಾಲ ಜಾತ್ರೆ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಜನರು ಅಂಗಡಿಗಳನ್ನು ಹಾಕುತ್ತಾರೆ. ಇದೀಗ ಕೆಲ ದುಷ್ಕರ್ಮಿಗಳು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿರುವುದು ಸರಿಯಲ್ಲ ಎಂದರು.