ಲಕ್ನೋ: ಅಪಹರಣ ಮಾಡಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡುತ್ತೇನೆ ಎಂದು ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ ಹಾಕಿರುವ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ನಡೆದಿದೆ. ಈ ವಿವಾದಾತ್ಮಕ ಹೇಳಿಕೆ ನೀಡಿದ ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ವಿಡಿಯೊವನ್ನು ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಉತ್ತರ ಪ್ರದೇಶ ಪೊಲೀಸರ ಅಧಿಕೃತ ಹ್ಯಾಂಡಲ್‌ಗೆ ಟ್ಯಾಗ್ ಮಾಡಲಾಗಿದೆ. 41 ಸೆಕೆಂಡುಗಳ ಕ್ಲಿಪ್‌ನಲ್ಲಿ, ಹಿನ್ನಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನು ಸಹ ಕಾಣಬಹುದು.
ಕೇಸರಿ ತೊಟ್ಟಿರುವ ಹಿಂದೂ ಸ್ವಾಮೀಜಿಯೊಬ್ಬ ಪ್ರಚಾರ ವಾಹನದಲ್ಲಿ ತೆರಳುತ್ತಾ ಮೈಕ್‍ನಲ್ಲಿ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಪ್ರಚಾರ ವಾಹನದಲ್ಲಿ ಪೊಲೀಸರು ಸಹ ಇದ್ದಾರೆ. ಈ ವೇಳೆಯೇ ಸ್ವಾಮೀಜಿ, ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾನೆ. ಅಲ್ಲದೇ ಕೋಮು ಭಾವನೆಗೆ ಧಕ್ಕೆ ತರುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾನೆ.
ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸೀತಾಪುರ್ ಉತ್ತರ ಪ್ರದೇಶ ರಾಜ್ಯದ ರಾಜಧಾನಿ ಲಕ್ನೋದಿಂದ ಸುಮಾರು 100 ಕಿ.ಮೀ.ದೂರದಲ್ಲಿದೆ. ಸ್ಥಳೀಯ ದೇವಸ್ಥಾನದ ಮಹಂತ್ ಬಜರಂಗದಾಸ್ ಎಂದು ಗುರುತಿಸಲ್ಪಟ್ಟಿರುವ ವ್ಯಕ್ತಿ ಹೇಳಿದ್ದಾರೆ. ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ ಆರು ದಿನಗಳ ನಂತರ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಹಮ್ಮದ್ ಜಬ್ಬೀರ್ ಎಂಬವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, ಏಪ್ರಿಲ್ 2ರಂದು ಈ ಘಟನೆ ನಡೆದಿದೆ. ಆದರೆ ಈವರೆಗೂ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ಎಚ್ಚೆತ್ತ ಪೊಲೀಸರು, ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
TRIGGER WARNING!
A Mahant in front of a Masjid in the presence of Police personals warns that He would K!dnap Muslim Women and ₹@pe them in Open.According to the locals near Sheshe wali Masjid, Khairabad, Sitapur. This happened on 2nd Apr 2022, 2 PM. @sitapurpolice @Uppolice pic.twitter.com/wkBNLnqUW0
— Mohammed Zubair (@zoo_bear) April 7, 2022
ಈ ವಿಡಿಯೋ ಎಪ್ರಿಲ್ 2 ರಂದು ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಾಕ್ಷಿಗಳ ಹೇಳಿಕೆಗಳ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸೀತಾಪುರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಟ್ವೀಟ್ ಮಾಡಿದ್ದಾರೆ.
ವಿಡಿಯೋದಲ್ಲಿ ಏನಿದೆ?: ಈ ಪ್ರದೇಶದಲ್ಲಿ ಯಾವುದೇ ಹುಡುಗಿಗೆ ಮುಸ್ಲಿಮರು ಕಿರುಕುಳ ನೀಡಿದರೆ, ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಸಾರ್ವಜನಿಕವಾಗಿ ಅತ್ಯಾಚಾರ ಮಾಡಲಾಗುವುದು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿ ಹೇಳಿಕೆಗೆ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿರುವುದು ಕಾಣುತ್ತದೆ.