ದೇವನಹಳ್ಳಿ | ಉತ್ತರಾಖಂಡ್ 6ನೇ ರಾಜ್ಯ ಹಣಕಾಸು ಆಯೋಗ ನಿಯೋಗ ಭೇಟಿ

ದೇವನಹಳ್ಳಿ: ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗ ಅಧ್ಯಯನಕ್ಕಾಗಿ ಗುರುವಾರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿತು.

ಇದನ್ನೂ ಓದಿ: ವಿದ್ಯುತ್ ಇಲಾಖೆಯಿಂದ ಇಂಟರ್ನೆಟ್ ವ್ಯತ್ಯಯ; ಜನರ ಪರೆದಾಟ

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ, ಜಿಲ್ಲಾ, ತಾಲ್ಲೂಕು, ಗ್ರಾಮ ಹಂತ, ಕೂಸಿನ ಮನೆ, ನರೇಗಾ, ಇ-ಸ್ವತ್ತು, ಗ್ರಾಮಗಳ ಸ್ವಚ್ಛತಾ ಕಾರ್ಯ ಮತ್ತು ತ್ಯಾಜ್ಯ ವಿಲೇವಾರಿ ಘಟಕ, ಅರಿವು ಕೇಂದ್ರಗಳು (ಗ್ರಂಥಾಲಯ), ಅಮೃತ ಸರೋವರ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಗಳ ಬಗ್ಗೆ ಮಾಹಿತಿ ನೀಡಿದರು. ದೇವನಹಳ್ಳಿ

ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಸೇವೆಯ ಮಾಹಿತಿ ಪಡೆದು, ಘನತ್ಯಾಜ್ಯ ವಿಲೇವಾರಿ ಘಟಕ, ಅರಿವು ಕೇಂದ್ರ, ಕೂಸಿನ ಮನೆಗೆ ಭೇಟಿ ನೀಡಿದರು. ದೊಡ್ಡಬಳ್ಳಾಪುರ ನಗರಸಭೆಗೆ ಭೇಟಿ ನೀಡಿ ಆಡಳಿತ ವೈಖರಿ, ಕಾರ್ಯವಿಧಾನ, ಆದಾಯ ವಿಧಾನ, ತೆರಿಗೆ, ಕ್ರಿಯಾ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ದೇವನಹಳ್ಳಿ

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಮಲ್ಲೇಶ್ ಉಪಸ್ಥಿತರಿದ್ದರು.

ಇದನ್ನೂ ನೋಡಿ: ದೂರುದಾರ ವ್ಯಕ್ತಿ ಪ್ರಾಮಾಣಿಕ, ಆತ ಹೇಳ್ತೀರೋದು ಎಲ್ಲವೂ ಸತ್ಯ – ಬಾಲನ್​Janashakthi Media

Donate Janashakthi Media

Leave a Reply

Your email address will not be published. Required fields are marked *