ಉತ್ತರಾಖಂಡ| ನೈನಿತಾಲ್​ನಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಮಂದಿ ಸಾವು

Please follow and like us:
ನೈನಿತಾಲ್: ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಬಸ್’ವೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ಅ-08 ನಡೆದಿದೆ. ಸಾವು

ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಮೃತದೇಹಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ರಸ್ತೆ ಅಪಘಾತ : ಮಗು ಸೇರಿ ಮೂವರ ಸಾವು, ಇಬ್ಬರು ಗಂಭೀರ

ಘಟನೆ ಕುರಿತು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸಿದ್ದು, ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡದಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದಿದೆ.

ವಿಡಿಯೋ ನೋಡಿ:ದ್ವಾರಕಾ ಎಕ್ಸ್‌ಪ್ರೆಸ್‌ವೇನಲ್ಲಿ ಅಕ್ರಮ? ನಿಗದಿತ ಮೊತ್ತಕ್ಕಿಂತ 14 ಪಟ್ಟು ಹೆಚ್ಚು ವೆಚ್ಚ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *