ಬೆಳಗಾವಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ . ಆರೋಗ್ಯ ಇಲಾಖೆಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದೆ. ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು, 32870 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.
ಇದನ್ನೂ ಓದಿ : ವಿಫಲವಾದ ಕೊಳವೆ ಬಾವಿಗಳನ್ನು ಸರಿಯಾಗಿ ಮುಚ್ಚದಿದ್ದರೇ 1 ವರ್ಷ ಜೈಲು 25 ಸಾವಿರ ದಂಡ: ಸಚಿವ ಎನ್ ಎಸ್ ಭೋಸರಾಜು ಮಾಹಿತಿ
ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು
ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ ನೇಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಒಂದು ವರ್ಷದ ಕಡ್ಡಾಯ ಸೇವೆಗಾಗಿ ಬರುವ ವೈದ್ಯ ಅಭ್ಯರ್ಥಿ/ತಜ್ಞ ವೈದ್ಯ ಅಭ್ಯರ್ಥಿಗಳನ್ನು ವೈದ್ಯರ ತಜ್ಞರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಇಲಾಖೆಯಲ್ಲಿ ಖಾಲಿಯಿರುವ 120 ತಜ್ಞ ವೈದ್ಯರು ಹಾಗೂ 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ರೋಗಿಗಳಿಗೆ ಅಡಚಣೆಯಾಗದಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಇದನ್ನೂ ನೋಡಿ : ಸಾಹಿತ್ಯ ಸಮ್ಮೇಳನ | ಆಹಾರ ಪದ್ಧತಿ ಮೇಲೆ ದಬ್ಬಾಳಿಕೆ – ವೈದಿಕಶಾಹಿ ವಾಸನೆ Janashakthi Media