ನಾಲ್ಕು ತಿಂಗಳಲ್ಲಿ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿ: ಎನ್. ಚೆಲುವರಾಯಸ್ವಾಮಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಇನ್ನು ಮೂರು-ನಾಲ್ಕು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಮಾರ್ಚ್‌ 18ರಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಎ ಇವರು ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿನ ಕೃಷಿ ಇಲಾಖೆಯಲ್ಲಿನ ವಿವಿಧ ಕಚೇರಿಗಳಲ್ಲಿ ಮಂಜೂರಾದ ಹುದ್ದೆಗಳ ವಿವರ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ತಿಳಿಸಬೇಕೆಂದು ಕೋರಿದರು.

ಇದನ್ನೂ ಓದಿ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿ: 400 ಮಂದಿ ಸಾವು, 250 ಮಂದಿಗೆ ಗಾಯ

ಈ ಸಮಯದಲ್ಲಿ ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿನ ವಿವಿಧ ಕಚೇರಿಗಳಲ್ಲಿ 143 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 30 ಹುದ್ದೆಗಳು ಖಾಲಿ ಇರುತ್ತವೆ. 2018ರಲ್ಲಿ 370 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 2023ರಲ್ಲಿ 940 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಬಂದಿದ್ದು, ಸರ್ಕಾರದ ನಿರ್ದೇಶನದಂತೆ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರುವುದಿಲ್ಲ. ಸರ್ಕಾರದ ಇತ್ತೀಚಿನ ನಿರ್ದೇಶನದನ್ವಯ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸಲಾಗುತ್ತಿದೆ.

ಇನ್ನು 2-3 ತಿಂಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಉಡುಪಿ ಭಾಗಕ್ಕೂ ಸಹ ನಿಯೋಜಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ನೋಡಿ: ಜೀವನೋಪಾಯದ ಮೇಲೆ ದಾಳಿ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಮಹಿಳಾ ದಿನದ ಪ್ರತಿಭಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *