ಐಸಿಸಿ ಅಂಡರ್-19 ವಿಶ್ವಕಪ್‌: ವೈಭವ್‌ ಸೂರ್ಯವಂಶಿ ಸ್ಪೋಟಕ ಶತಕ; ಹೊಸ ದಾಖಲೆ!

ನವದೆಹಲಿ: ಐಸಿಸಿ ಅಂಡರ್-19 ವಿಶ್ವಕಪ್‌ 2026ರ ರೋಚಕ ಫೈನಲ್ ಪಂದ್ಯದಲ್ಲಿ ಭಾರತದ ಯುವ ಪಡೆ ಇಂಗ್ಲೆಂಡ್ ವಿರುದ್ಧ ಅಬ್ಬರಿಸುತ್ತಿದೆ. ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರನ್‌ ಹೊಳೆ ಹರಿಯುತ್ತಿದ್ದು, ವೈಭವ್‌ ಸೂರ್ಯವಂಶಿ ಸ್ಪೋಟಕ ಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಐಸಿಸಿ 

ವೈಭವ್ ಸೂರ್ಯವಂಶಿ ದಾಖಲೆಯ ಶತಕ

ಟಾಸ್ ಗೆದ್ದ ಭಾರತ ತಂಡದ ನಾಯಕ ಆಯುಷ್ ಮ್ಹಾತ್ರೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಇಂಗ್ಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಐಸಿಸಿ 

ಕೇವಲ 15 ವರ್ಷದ ವೈಭವ್, ಫೈನಲ್ ಪಂದ್ಯದಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿ 175 ರನ್ ಸಿಡಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. ಇವರ ಈ ಸ್ಫೋಟಕ ಇನ್ನಿಂಗ್ಸ್‌ನಲ್ಲಿ ದಾಖಲೆಯ 15 ಸಿಕ್ಸರ್‌ಗಳು ಸೇರಿದ್ದವು.

ಇದನ್ನೂ ಓದಿ: ರಂಗಭೂಮಿಯ ಬೆಳವಣಿಗೆಗೆ ರಂಗ ಪರಿಷೆ ಅವಶ್ಯಕ: ಟಿ.ಎನ್. ಸೀತಾರಾಮ್ ಅಭಿಪ್ರಾಯ

ರನ್ಹೊಳೆ ಹರಿಸಿದ ಭಾರತದ ಕಿರಿಯರು

ವೈಭವ್ ಅವರಿಗೆ ಉತ್ತಮ ಸಾಥ್ ನೀಡಿದ ವೇದಾಂತ್ ತ್ರಿವೇದಿ ಮತ್ತು ನಾಯಕ ಆಯುಷ್ ಮ್ಹಾತ್ರೆ ತಂಡದ ಮೊತ್ತವನ್ನು 300ರ ಗಡಿ ದಾಟಿಸಿದರು. 32 ಓವರ್‌ಗಳ ಮುಕ್ತಾಯಕ್ಕೆ ಭಾರತ 3 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿ ಬಲಿಷ್ಠ ಸ್ಥಿತಿಯಲ್ಲಿದೆ. ಮೈದಾನದಲ್ಲಿ ಈಗ ವಿಹಾನ್ ಮಲ್ಹೋತ್ರಾ ಮತ್ತು ವೇದಾಂತ್ ತ್ರಿವೇದಿ ಬ್ಯಾಟಿಂಗ್ ಮುಂದುವರಿಸುತ್ತಿದ್ದಾರೆ.

ಇಂಗ್ಲೆಂಡ್ ಪರ ಮ್ಯಾನಿ ಲಮ್ಸ್‌ಡನ್ ಮತ್ತು ಫರ್ಹಾನ್ ಅಹ್ಮದ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರೂ, ಭಾರತದ ರನ್ ವೇಗಕ್ಕೆ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ.

ಇದನ್ನೂ ನೋಡಿ: ಬೆಂಗಳೂರು ಚಲನಚಿತ್ರೋತ್ಸವ| ಪ್ಯಾಲೆಸ್ತೀನ್‌ ಸಿನಿಮಾಗಳಿಗೆ ನಿರ್ಬಂಧ -ಸಿನಿಮಾಸಕ್ತರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *