ಹಿರಿಯ ಸಾಹಿತಿ ದೇವನೂರು ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಣೆ

ಚೆನ್ನೈ: ಹಿರಿಯ ಸಾಹಿತಿ ದೇವನೂರು ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಿಸಿದೆ.

ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್ ಮತ್ತು ಪದಕವನ್ನು ಒಳಗೊಂಡಿರುತ್ತದೆ.
ಅದೇ ರೀತಿ ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ. ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2011ರಲ್ಲಿ ಪದಶ್ರೀ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ : ಭಾರತದಾದ್ಯಂತ 1.17 ದಶಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ: ಕೇಂದ್ರ ಸರ್ಕಾರ

ದೇವನೂರ ಮಹಾದೇವ ಅವರ ಕುಸುಮಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇದಲ್ಲದೇ ಎದೆಗೆ ಬಿದ್ದ ಅಕ್ಷರ, ಆರ್‌ಎಸ್‌ಎಸ್‌ ಆಳ ಮತ್ತು ಅಗಲ, ಒಡಲಾಳ ಮೊದಲಾದ ಪುಸ್ತಕಗಳು  ಅವರ ಕೃತಿಗಳಲ್ಲಿ ಪ್ರಮುಖವಾದವುಗಳಾಗಿವೆ.

ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ, ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುವುದು ಎಂದು ಕಳೆದ ವರ್ಷ ವೈಕಂ ಸತ್ಯಾಗ್ರಹ ಶತಮಾನೋತ್ಸವದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಘೋಷಿಸಿದ್ದರು.

ಇದನ್ನೂ ನೋಡಿ : ಅಗ್ಘಣಿ ಮೀಸಲಾಗಬೇಕೆಂಬುದು ಶೀಲವೆ ? Janashakthi Media

Donate Janashakthi Media

Leave a Reply

Your email address will not be published. Required fields are marked *