ವಾಲ್ಮೀಕಿ ಅಭಿವೃದ್ಧಿ ನಿಗಮ ಪ್ರಕರಣ:ಯಾವುದೇ ತನಿಖಾ ಸಂಸ್ಥೆ ಆಗಿರಲಿ ಒಂದು ಪಕ್ಷದ ಪರ ಕೆಲಸ ಮಾಡಬಾರದು – ಸಿಎಂ

ಬೆಂಗಳೂರು : ಇಡಿ ಅಧಿಕಾರಿಗಳು ಸಿಎಂ ಮತ್ತು ಡಿಸಿಎಂ ಹೆಸರು ಹೇಳುವಂತೆ ಒತ್ತಡ ಹಾಕಿದ್ದರು ಎಂದು ಶಾಸಕ ನಾಗೇಂದ್ರ ಹೇಳಿಕೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾದ ನಂತರದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,  ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಯಾವುದೇ ತನಿಖಾ ಸಂಸ್ಥೆ ಆಗಿರಲಿ ಒಂದು ಪಕ್ಷದ ಪರ ಕೆಲಸ ಮಾಡಬಾರದು. ಇಡಿ, ಸಿಬಿಐ, ಐಟಿ ಯಾವುದೇ ಆಗಲಿ ಬೇಧ ಭಾವ ಇಲ್ಲದೆ ಕೆಲಸ ಮಾಡಬೇಕು. ನನ್ನ ಮತ್ತು ಡಿಸಿಎಂ ಹೆಸರು ಹೇಳುವಂತೆ ಒತ್ತಾಯ ಮಾಡಿದ್ದಾರಂತೆ ಇಡೀ ಒತ್ತಾಯಿಸಿದ ಬಗ್ಗೆ ಶಾಸಕ ನಾಗೇಂದ್ರ ಅವರೇ ಹೇಳಿದ್ದಾರೆʼ ಎಂದು ಅವರು ತಿಳಿಸಿದರು.

ಇದನ್ನು ಓದಿ : ನ್ಯಾಯದೇವತೆಯ ಪ್ರತಿಮೆಯ ಹೊಸ ರೂಪ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನ,ಬಿಚ್ಚಿದ ಕಣ್ಣಿನ ಪಟ್ಟಿ

ವಾಲ್ಮೀಕಿ ನಿಗಮದ ಹಗರಣದಲ್ಲಿ ನನ್ನಿಂದ ಯಾವುದೇ ತಪ್ಪು ನಡೆದಿಲ್ಲ. ಆದರೂ, ನನ್ನನ್ನು ಬಂಧಿಸಿದ್ದರು. ಅಲ್ಲದೆ ಈ ಒಂದು ಪ್ರಕರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಒತ್ತಡ ಹೇರಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಡಿ ಅಸ್ತ್ರ ಬಳಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅಭಿವೃದ್ಧಿ ಕೆಲಸ ಬಿಟ್ಟು ಬಿಜೆಪಿ ಕೀಳುಮಟ್ಟದ ರಾಜಕಾರಣ ನಡೆಸುತ್ತಿದೆ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಇದೇ ರೀತಿ ಕೀಳುಮಟ್ಟದ ರಾಜಕಾರಣ ನಡೆಸಿದರೆ ರಾಜ್ಯದಲ್ಲಿ ಆ ಪಕ್ಷದ ಶಾಸಕರ ಸಂಖ್ಯೆ 40ಕ್ಕೆ ಇಳಿಯಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ಪ್ರಕರಣದಲ್ಲೂ ಮುಖ್ಯಮಂತ್ರಿ ಅವರನ್ನು ಸಿಲುಕಿಸಲು ಷಡ್ಯಂತ್ರ ನಡೆಸಲಾಗುತ್ತಿದೆ. ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿ- ಜೆಡಿಎಸ್‌ ಮುಖಂಡರ ಹುನ್ನಾರ ಯಶಸ್ವಿಯಾಗುವುದಿಲ್ಲ ಎಂದು ನಾಗೇಂದ್ರ ಹೇಳಿದರು.

ಇದನ್ನು ನೋಡಿ : ಬೆಂಗಳೂರು ಮಳೆ: ಮಾನ್ಯತಾ ಟೆಕ್ ಪಾರ್ಕ್ ರಸ್ತೆ ಜಲಾವೃತ Janashakthi Media

Donate Janashakthi Media

Leave a Reply

Your email address will not be published. Required fields are marked *