ಹೈದರಾಬಾದ್ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಎನ್ನಲಾದ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣ ತನಿಖೆಯನ್ನು ನಡೆಸುತ್ತಿರುವ ಎಸ್‌ಐಟಿ (ವಿಶೇಷ ತನಿಖಾ ದಳ) ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದ್ದು, ಐದು ಮಂದಿಯನ್ನು ಎಸ್‌ಐಟಿ ಬಂಧಿಸಿದೆ. ವಾಲ್ಮೀಕಿ
ಎಸ್‌ಐಟಿ ಬ್ಯಾಂಕಿನಲ್ಲಿನ ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಎಂಬ ಈ ಐವರನ್ನು ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದೆ.
ಇದನ್ನು ಓದಿ : ಆನ್‌ಲೈನ್‌ನಲ್ಲಿ ವೃದ್ಧನಿಗೆ ಪ್ರೇಮದ ಹೆಸರಿನಲ್ಲಿ ದೋಖಾ
ಈ ಪೈಕಿ ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು.
ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಹೀಗೆ ವರ್ಗಾವಣೆಯಾಗಿದ್ದ 94.73ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿತ್ತು. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ತನಿಖೆ ಮುಂದುವರೆದಿದೆ ಎನ್ನಲಾಗಿದೆ.
ಇದನ್ನು ನೋಡಿ : ಪರಿಸರ ಸಂರಕ್ಷಣೆ ನಮ್ಮ ಹೊಣೆ : ಮರುಭೂಮಿಯಾಗದಂತೆ ನೋಡಿಕೊಳ್ಳೋಣ Janashakthi Media