ವಸತಿ ನಿಲಯ ಕೊಠಡಿ ಕೊರತೆ ನೀಗಿಸಿ-ಸ್ಥಳವಕಾಶ ನೀಡಿ; ಉನ್ನತ ಶಿಕ್ಷಣ ವಿದ್ಯಾರ್ಥಿಗಳ ಮನವಿ

ಚಿತ್ರದುರ್ಗ: ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವ ಬಿ.ಎಡ್‌ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಲಭಿಸಿದರೂ, ಕೊಠಡಿಗಳ ಕೊರತೆ ಎದುರಾಗಿರುವುದಂದ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸಮಸ್ಯೆ ಎದುರಾಗಿದೆ ಎಂದು ದಲಿತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ಇದನ್ನು ಓದಿ: ಹಾಸ್ಟೆಲ್‌ ವಿದ್ಯಾರ್ಥಿಗಳ ಸೌಲಭ್ಯದ ಹೆಸರಲ್ಲಿ ಕೋಟಿ ಕೋಟಿ ಹಣ ಗುಳಂ ಮಾಡಿದ ಅಧಿಕಾರಿಗಳು

ಇಲಾಖೆಗೆ ಮನವಿ ಮಾಡಿಕೊಂಡಿರುವ ಬಿ.ಎಡ್‌ ವಿದ್ಯಾಭ್ಯಾಸ ಮಾಡುತ್ತಿರುವ 8 ಮಂದಿ ವಿದ್ಯಾರ್ಥಿಗಳು, ವಸತಿ ನಿಲಯದಲ್ಲಿ ಉಳಿದುಕೊಳ್ಳಲು ಸ್ಥಳವಕಾಶ ಕೋರಿ ಸಲ್ಲಿಕೆಯಾದ ವಿದ್ಯಾರ್ಥಿಗಳ ಪ್ರವೇಶಾತಿ ಪಟ್ಟಿ ಬಿಡುಗಡೆಯಾಗಿದೆ. ಪಟ್ಟಿಯಲ್ಲಿ ನಮ್ಮ ಹೆಸರುಗಳು  ಇದ್ದು, ನಾವು ವಿದ್ಯಾರ್ಥಿ ವಸತಿ ನಿಲಯ ಪ್ರವೇಶ ಪಡೆಯಲು ಬಂದಾಗ ವಸತಿ ನಿಲಯದ ಮೇಲ್ವಿಚಾರಕರು ಇಲ್ಲಿ ಕೊಠಡಿಗಳ ಕೊರತೆ ಇದ್ದು ಸ್ಥಳವಕಾಶವಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಕಾಲೇಜು ಶೈಕ್ಷಣಿಕ ತರಗತಿಗಳು ಆರಂಭವಾಗಿದೆ. ಉನ್ನತ ಶಿಕ್ಷಣ ಪಡೆಯಲು ದೂರದ ಊರುಗಳಿಂದ ಪ್ರಯಾಣಿಸಲು ಸಾಧ್ಯವಿಲ್ಲ ಮತ್ತು ಬಯೋಮೆಟ್ರಿಕ್‌ ವ್ಯವಸ್ಥೆ ಇರುವುದರಿಂದ ವಿದ್ಯಾರ್ಥಿ ವಸತಿ ನಿಲಯದಲ್ಲೇ ಉಳಿದುಕೊಂಡು ಶಿಕ್ಷಣ ಕಲಿಯಬೇಕಿದೆ. ಹಾಗಾಗಿ ಸ್ಥಳವಾಕಾಶ ನಿಗದಿಪಡಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಇದನ್ನು ಓದಿ: ಊಟ ಸರಿಯಿಲ್ಲ ಅಂತಾ ಕೇಳಿದ್ದಕ್ಕೆ 25 ವಿದ್ಯಾರ್ಥಿಗಳು ಹೊರಕ್ಕೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ರಾಜ್ಯ ಕಾರ್ಯದರ್ಶಿ ಭೀಮನಗೌಡ ಮಾತನಾಡಿ, ವಿದ್ಯಾರ್ಥಿ ವಸತಿ ನಿಲಯಕ್ಕಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಅವರಿಗೆ ಕಡ್ಡಾಯವಾಗಿ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ನಿಯಮವಿದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಅಥವಾ ವಿದ್ಯಾರ್ಥಿ ವಸತಿ ನಿಲಯಕ್ಕೆ ಸಂಬಂಧಪಟ್ಟವರು ಸ್ಥಳವಿಲ್ಲ, ಕೊಠಡಿ ಇಲ್ಲವೆಂದು ನಿರಾಕರಿಸುವಂತಿಲ್ಲ. ವಿದ್ಯಾರ್ಥಿಗಳಿಗೆ ಕೂಡಲೆ ವಸತಿ ಸೌಲಭ್ಯ ಕಲ್ಪಿಸಿ, ಎಲ್ಲಾ ಸೌಕರ್ಯಗಳನ್ನು ನೀಡಬೇಕೆಂದು ಹೇಳಿದರು.

ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ರಾಜ್ಯ ಅಧ್ಯಕ್ಷ ಅಮರೇಶ ಕಡಗದ್‌ ಮಾತನಾಡಿ, ಎಸ್‌ಎಫ್‌ಐ ನ ಹೋರಾಟದ ಭಾಗವಾಗಿ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶಿಕ್ಷಣ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ನಿಲಯ ಸೌಕರ್ಯಗಳು ಸ್ಥಳವಕಾಶ ನಿಗದಿಯಾಗುತ್ತಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌. ಅಂಜನೇಯ ಜವಾಬ್ದಾರಿ ವಹಿಸಿದ್ದ ಸಂದರ್ಭದಲ್ಲಿ ರಾಜ್ಯದಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಾಗಿದೆ.

ಇದನ್ನು ಓದಿ: ಹಾಸ್ಟೇಲ್‌ ನರಕ : ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?!

ಹೋರಾಟದ ಫಲದಿಂದಾಗಿ ಸರ್ಕಾರವು ವಿದ್ಯಾರ್ಥಿಗಳಿಗೆ ವಸತಿ ನಿಲಯ ಕಲ್ಪಿಸಬೇಕೆಂದು ಆದೇಶ ಹೊರಡಿಸಿದೆ. ಆದರೆ, ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯಗಳನ್ನು ನಿಗದಿಪಡಿಸದೇ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಉನ್ನತ ಶಿಕ್ಷಣ ಪಡೆಯಬೇಕೆಂಬ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ಕೊಡುವ ಕ್ರಮವನ್ನು ಕೈಬಿಡಬೇಕು. ಕೂಡಲೇ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಎಸ್‌ಎಫ್‌ಐ ಮನವಿ ಮಾಡುತ್ತದೆ. ಇಲ್ಲವಾದಲ್ಲಿ ಎಸ್‌ಎಫ್‌ಐ ಸಂಘಟನೆಯು ಎಲ್ಲಾ ವಿದ್ಯಾರ್ಥಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಮುಂಭಾಗ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *