- ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಶುರು
- ವಾಯವ್ಯ ಶಿಕ್ಷಕರು, ಪದವೀಧರರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆಕೂಡ ಚಾಲನೆ
ಬೆಳಗಾವಿ/ ಮೈಸೂರು: ವಾಯವ್ಯ ಶಿಕ್ಷಕರು, ಪದವೀಧರರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯೂ ಕೂಡ ಆರಂಭವಾಗಿದೆ.
ಬೆಳಗಾವಿಯಲ್ಲಿ ಜ್ಯೋತಿ ಕಾಲೇಜಿನಲ್ಲಿ ವಾಯವ್ಯ ಶಿಕ್ಷಕರು, ಪದವೀಧರರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದರೆ, ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯು ಕೂಡ ಅಲ್ಲಿನ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಬುಧವಾರ ಆರಂಭವಾಗಿದೆ.
ಮತಪೆಟ್ಟಿಗೆಗಳನ್ನು ಇರಿಸಲಾದ ಭದ್ರತಾ ಕೊಠಡಿಗಳನ್ನು ತೆರೆಯಲಾಗಿದ್ದು, ಬೆಳಿಗ್ಗೆ 8ರಿಂದ ಪ್ರಕ್ರಿಯೆ ಆರಂಭವಾಗಿದೆ. ಅಧಿಕಾರಿಗಳ ಸಮ್ಮುಖದಲ್ಲಿ ಯಾವುದೇ ಸಮಸ್ಸೆ ಇಲ್ಲದೆ ಮತ ಎಣಿಕೆ ಪ್ರಕ್ರಿಯೆ ನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕೆ ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ ಹಾಗೂ ಕೇಂದ್ರಗಳಲ್ಲಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ನಿಯಮಗಳನ್ನ ಪಾಲಿಸಲಾಗಿದೆ.
ಎಣಿಕೆ ಪ್ರಕ್ರಿಯೆಗೆ ಕೊಠಡಿಗಳಲ್ಲಿ ಟೇಬಲ್ಗಳ ವ್ಯವಸ್ಥೆ ಮತ್ತು ಮೇಲ್ವಿಚಾರಕ ಸಿಬ್ಬಂದಿ ಹಾಗೂ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೋಮವಾರ 150 ಮತಗಟ್ಟೆಗಳಲ್ಲಿ ನಡೆದ ಚುನಾವಣೆಯಲ್ಲಿ ಮತದಾರರು ಶೇ 69.95ರಷ್ಟು ಮತದಾನವಾಗಿದೆ. ಹೋದ ಚುನಾವಣೆಗಿಂತ ಶೇ 29ರಷ್ಟು ಹೆಚ್ಚಿನ ಮತದಾನವಾಗಿರುವ ಕಾರಣ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.