ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ಬಹ್ಮ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯ (103) ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಮರುದಿನವೇ ಅವರು ನಿಧನರಾಗಿದ್ದಾರೆ. ಬೆಂಗಳೂರು
ಇದನ್ನೂ ಓದಿ : ತಿರುವನಂತಪುರ | ಪ್ರಜಾಪ್ರಭುತ್ವಕ್ಕೆ ಎಸ್ಐಆರ್ ಜಾರಿ ಅಪಾಯ – ಕೇರಳ ಸಿಎಂ ಪಿಣರಾಯಿ ವಿಜಯನ್
103 ವರ್ಷದ ಪೆನ್ನ ಓಬಳಯ್ಯ ಅವರ ಈ ಸಾಧನೆಯನ್ನು ಗುರುತಿಸಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸಲು ಬಂದ ಪೆನ್ನ ಓಬಳಯ್ಯ ಅಸ್ವಸ್ಥರಾಗಿದ್ದರು. ಅವರ ಪರವಾಗಿ ಅವರ ಮಕ್ಕಳು ಪ್ರಶಸ್ತಿ ಸ್ವೀಕಾರ ಮಾಡಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿ ಪುರದ ನಿವಾಸಿಯಾಗಿದ್ದ ಅವರು ಇಡೀ ದೇಶಕ್ಕೆ ಸಾಂಪ್ರದಾಯಿಕ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದರು. ಅವರಿಂದ ನೂರಾರು ಜನ ವೀಣೆ ತಯಾರಿಸುವುದನ್ನು ಕಲಿತಿದ್ದಾರೆ.
ಪ್ರಶಸ್ತಿ ಪಡೆದ ಮರುದಿನವೇ ಅವರು ದೈವಾಧೀನರಾಗಿರುವುದು ದುರಾದೃಷ್ಟಕರ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸಿಂಪಾಡಿಪುರದ ಹೆಸರನ್ನು ತಮ ವೀಣೆಗಳ ಮೂಲಕ ರಾಷ್ಟ್ರಕ್ಕೆ ಪರಿಚಯಿಸಿದ ಪೆನ್ನ ಓಬಳಯ್ಯ ಅವರ ಸಾಂಸ್ಕೃತಿಕ ಸೇವೆಯನ್ನು ನೆನೆಯುತ್ತಾ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ನೋಡಿ : ಧರ್ಮಸ್ಥಳ ಪ್ರಕರಣ | ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ- ಹೈಕೋರ್ಟ್ ಆದೇಶ Janashakthi Media
