ಬೆಂಗಳೂರು: ವೇತನ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂದು ಆಗ್ರಹಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳು ಮತ್ತು ನೌಕರರು ಮಾರ್ಚ್ 01ರಿಂದ ಮುಷ್ಕರಕ್ಕೆ ಮುಂದಾಗಲಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ರಾಜ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೆ ಪಡೆದು, ಚುನಾವಣೆ ನೀತಿ ಸಂಹಿತೆಗಿಂತ ಮೊದಲು ನೌಕರರ ಸೌಲಭ್ಯಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.
ಇದನ್ನು ಓದಿ: ವೇತನ ಪರಿಷ್ಕರಣೆ-ನಿಶ್ಚಿತ ಪಿಂಚಣಿ ಪದ್ದತಿ ಕುರಿತು ಸ್ಪಂದಿಸದ ನೌಕರ ವಿರೋಧಿ ಬಜೆಟ್: ಜೈಕುಮಾರ್
ಪಾಲಿಕೆಯ ಸಿಬ್ಬಂದಿ ಮತ್ತು ಕುಟುಂಬ ವರ್ಗದವರಿಗೆ ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳು ಒಳಗೊಂಡಿದೆ. ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿದ್ದೇವೆ. ಮಾರ್ಚ್ 1ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ಅರ್ನಿಷ್ಟಾವ ಮುಷ್ಕರ ನಡೆಸುವುದು ಅನಿವಾರ್ಯ ಎಂದರು.
ರಾಜ್ಯದ ಎನ್ಪಿಎಸ್ ನೌಕರರ ಜೀವನ ನಿವೃತ್ತಿ ನಂತರದ ಜೀವನ ಕಷ್ಟಕರವಾಗಿರುವುದರಿಂದ ಎನ್ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರಲೇಬೇಕು. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್ಗಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ(ಒಪಿಎಸ್) ಯನ್ನು ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ.
ಇದನ್ನು ಓದಿ: ಎನ್ಪಿಎಸ್ ರದ್ದತಿಗೆ ಆಗ್ರಹಿಸಿ ಸರ್ಕಾರಿ ನೌಕರರ ಬೃಹತ್ ಪ್ರತಿಭಟನಾ ಪ್ರದರ್ಶನ ಆರಂಭ
ನ್ಯಾಯಾಯುತ ಬೇಡಿಕೆ ಆಗ್ರಹಿಸಿ ಹೋರಾಟ ಹಮ್ಮಿಕೊಂಡ ಸಂದರ್ಭದಲ್ಲಿ ನೀಡಿರುವ ಆಶ್ವಾಸನೆಯು ಸಕರಾತ್ಮಕವಾಗಿ ಸ್ಪಂದಿಸದ ಇರುವ ಕಾರಣದಿಂದ ನೀಡಿರುವ ಮನವಿ ಪತ್ರಗಳನ್ನು ಆದ್ಯತೆ ಮೇರೆಗೆ ಅತೀ ಜರೂರಾಗಿ ಪರಿಗಣಿಸಬೇಕೆಂದು ಎ.ಅಮೃತ್ ರಾಜ್ ತಿಳಿಸಿದರು.
ಮಾರ್ಚ್ 01ರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ಣಯದಂತೆ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹಮ್ಮಿಕೊಂಡಿರುವ ಅರ್ನಿಷ್ಠಾವಧಿ ಮುಷ್ಕರಕ್ಕೆ ನಮ್ಮ ಸಂಘ ಬೆಂಬಲ ವ್ಯಕ್ತಪಡಿಸಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ