ಮೇ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ-ಮುತ್ತ ವಾಹನ ಸಂಚಾರ ನಿರ್ಬಂಧ

ಬೆಂಗಳೂರು: ಮೇ 3 ಶನಿವಾರದಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತ-ಮುತ್ತಲ ರಸ್ತೆಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ಮತ್ತು ನಿಲುಗಡೆ ನಿರ್ಬಂಧಿಸಲಾಗಿದೆ.

ಕ್ರಡಾಂಗಣದ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಲಿದ್ದು, ಸುಗಮ ಸಂಚಾರಕ್ಕಾಗಿ ಹಲವು ಕ್ರಮ ಕೈಗೊಳ್ಳಲಾಗಿದೆ. ಪಂದ್ಯ ವೀಕ್ಷಿಸಲು ಬರುವವರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಓಲಾ, ಊಬರ್‌, ಆಟೊ, ಕ್ಯಾಬ್‌ಗಳ ಪಿಕ್‌ಆಪ್‌ ಮತ್ತು ಡ್ರಾಪ್‌ಗೆ ಸ್ಥಳ ನಿಗದಿಪಡಿಸಲಾಗಿದೆ. ಕ್ರೀಡಾಂಗಣದ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳದ ಕೊರತೆ ಇರುವುದರಿಂದ ಸಾರ್ವಜನಿಕರು ಬಿಎಂಟಿಸಿ, ಮೆಟ್ರೊ ರೈಲಿನಲ್ಲಿ ಪಂದ್ಯ ವೀಕ್ಷಣೆಗೆ ಬರಬೇಕು ಎಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಾಂತಿಯಿಂದ ಇರುವುದಕ್ಕೆ ಬಿಜೆಪಿ ಸಹಕಾರ ನೀಡಬೇಕು: ಡಿ.ಕೆ. ಶಿವಕುಮಾರ್

ಶನಿವಾರ ಆದ ಕಾರಣ ಪಂದ್ಯಕ್ಕೆ ಭಾರೀ ಸಂಖ್ಯೆಯ ಪ್ರೇಕ್ಷಕರು ಬರುವ ಸಾಧ್ಯತೆ ಇದ್ದು ಕೆಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌ ಹೆಚ್ಚಾಗಿರುವ ಸಾಧ್ಯತೆಗಳಿವೆ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ-ಮುತ್ತಲಿನ ರಸ್ತೆಗಳಲ್ಲಿ ಓಡಾಡುವ ವಾಹನ ಸವಾರರು ಇದನ್ನು ಗಮನಿಸಬಹುದು.

ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್‌ ಅಧಿಕಾರಿ/ಸಿಬ್ಬಂದಿ ವಾಹನಗಳನ್ನು ಕಬ್ಬನ್‌ ಪಾರ್ಕ್‌ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್‌ ಮುಂಭಾಗದ ಪಾರ್ಕಿಂಗ್‌ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಈ ರಸ್ತೆಯಲ್ಲಿ ನಿರ್ಬಂಧ

ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ-ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.

ನಿಲುಗಡೆಗೆ ಅವಕಾಶ

ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ, ಯು.ಬಿ ಸಿಟಿ, ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗ ಹಾಗೂ ಕಿಂಗ್ಸ್ ರಸ್ತೆಯಲ್ಲಿ ನಿಲ್ಲಿಸಬಹುದು.

ಇದನ್ನೂ ನೋಡಿ: ಪಿಯುಸಿ ನಂತರ ಪಶುವೈದ್ಯಕೀಯ ಶಿಕ್ಷಣ ಪಡೆಯುವುದು ಹೇಗೆ? Janashakthi Media

Donate Janashakthi Media

Leave a Reply

Your email address will not be published. Required fields are marked *