ಹಿರಿಯ ಪತ್ರಕರ್ತ, ಹೋರಾಟಗಾರ ಮುಳ್ಳಳ್ಳಿ ಸೂರಿ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತರಾದ ಮುಳ್ಳಳ್ಳಿ ಸೂರಿ ಅವರು ಇಂದು ನಿಧನರಾದರು. ನಾಲ್ಕು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬ್ರೈನ್ ಟ್ಯೂಮರ್ ಆಪರೇಶನ್ಗೆ ಒಳಗಾಗಿದ್ದ ಅವರು ಬಳಿಕ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚೇತರಿಸಿಕೊಳ್ಳುವ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಪತ್ರಕರ್ತರ ಸಹಕಾರ ಸಂಘ ಮತ್ತು ಪ್ರೆಸ್‌ ಕ್ಲಬ್‌ನಲ್ಲಿ ಸಕ್ರೀಯವಾಗಿದ್ದರು.

ಇನ್ನು ಮುಳ್ಳಳ್ಳಿ ಸೂರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಹಲವು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದ ಸೂರಿ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬವರ್ಗ ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಹಿರಿಯ ಪತ್ರಕರ್ತರ ಮೇಲೆ ರಾಜದ್ರೋಹದ ಎಫ್.ಐ.ಆರ್.

ಮುಳ್ಳಳ್ಳಿ ಸೂರಿಯವರು ಜನಪರ ಸಂಘಟನೆಗಳ ಜತೆಯೂ ಗುರುತಿಸಿಕೊಂಡಿದ್ದರು. ಪೋಷಕರ ಸಂಘಟನೆಯ ನಾಯಕರಾಗಿ ವಿದ್ಯಾರ್ಥಿ ಚಳುವಳಿಗೆ ಪ್ರೋತ್ಸಾಹವನ್ನು ನೀಡುತ್ತಿದ್ದರು ಎಂದು ಎಸ್‌ಎಫ್‌ಐ ಮಾಜಿ ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳ ವಿರುದ್ಧ ಹೋರಾಟ ನಡೆಸುವುದು ಹೇಳಿದಷ್ಟು ಸುಲಭದ ಕೆಲಸವಲ್ಲ. ಅದೇನಾಗುತ್ತೊ ಬನ್ನಿ ಎಂದು 10 ಕ್ಕೂ ಹೆಚ್ಚು ಖಾಸಗಿ ಶಾಲೆಗಳ ವಿರುದ್ಧ ಹೋರಾಟ ನಡೆಸಲು ಪ್ರೇರಣೆ ನೀಡಿದ್ದರು. 12 ಪಿ.ಯು ಕಾಲೇಜುಗಳ ಮೇಲೆ ದೂರು ದಾಖಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಅವರ ಜತೆಗಿನ ಹೋರಾಟಗಳ ಮೆಲುಕು ಹಾಕಿದ್ದಾರೆ.

ಮುಳ್ಳಳ್ಳಿ ಸೂರಿಯವರ ನಿಧನಕ್ಕೆ ಪತ್ರಕರ್ತರು, ಜನಪರ ಸಂಘಟನೆಗಳ ನಾಯಕರು, ಪೋಷಕರ ಸಂಘಟನೆಗಳು ಸಂತಾಪ ಸೂಚಿಸಿವೆ

Donate Janashakthi Media

Leave a Reply

Your email address will not be published. Required fields are marked *