ಹಿರಿಯ ಪತ್ರಕರ್ತ, ಹೋರಾಟಗಾರ ಆರ್.ಜಯಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64) ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಹಿರಿಯ

ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನ ಮೂಲದವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು.

ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ ಮಾಡಿದ್ದರು.

ಇದನ್ನೂ ಓದಿ: ಹಾರೆ, ಪಿಕ್ಕಾಸಿ ಹಿಡಿದು ಒಂಟಿಯಾಗಿ ರಸ್ತೆ ನಿರ್ಮಾಣ ಮಾಡಿ ಸಾಹಸ ಮೆರೆದ ವ್ಯಕ್ತಿ

ಜನಪರ ಹೋರಾಟದಲ್ಲಿ ಭಾಗವಹಿಸಿದ್ದ  ಜಯಕುಮಾರ್ ಅವರು ಇತ್ತೀಚೆಗೆ ಗಾಂಧಿ ಮರೆತ ನಾಡಿನಲ್ಲಿ ಮತ್ತು ಕಾಡು ಹಾದಿಯ ಬೆಳಕಿನ ಜಾಡಿನಲ್ಲಿ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು.

ಎಸ್‌ಎಫ್‌ಐ ಮೂಲಕ ಸಾರ್ವಜನಿಕ ಸೇವೆಗೆ ಬಂದಿದ್ದ ಇವರು, ಎಸ್‌ಎಫ್‌ಐ ರಾಜ್ಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1981 ರಿಂದ 87 ರವರೆಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣದ ವಿರುದ್ಧ ಪ್ರಬಲ ಹೋರಾಟ ಸಂಘಟಿಸಿದ್ದರು

ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಇಂದು ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದ ಬಳಿ ಸಾರ್ವಜನಿಕ ದರ್ಶನ ಪಡೆಯಬಹುದು ಎಂದು ಕುಟುಂಬದ ಮೂಲಗಳು ತಿಳಿಸುವೆ.

ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್.ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ‌ಸೇರಿದಂತೆ ಜನಶಕ್ತಿ ಮೀಡಿಯಾ ಬಳಗ, ಭಾರತ ವಿದ್ಯಾರ್ಥಿ ಫೆಡರೇಶನ್(SFI), ಜನಪರ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು  (ಕೆಯುಡಬ್ಲ್ಯೂಜೆ) ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್.ಜಯಕುಮಾರ್ ಭಾಜನರಾಗಿದ್ದರು..

ಇದನ್ನೂ ನೋಡಿ: ಐದು ಹಂತದ ಮತದಾನ ಮುಗಿದರೂ ವಿವರ ನೀಡದ ಚುನಾವಣಾ ಆಯೋಗ : ಆಯೋಗದ ಸುತ್ತ ಅನುಮಾನದ ಹುತ್ತJanashakthi Media

Donate Janashakthi Media

Leave a Reply

Your email address will not be published. Required fields are marked *