ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ

ಬೆಂಗಳೂರು: ಸೋಮವಾರ, 9 ಸೆಪ್ಟೆಂಬರ್‌, ಬೆಳಗಿನ ಜಾವ 3.13ಕ್ಕೆ ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ (59) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ನಾಡಿಗೇರ್, ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ಮೂರುವರೆ ದಶಕಗಳ ಕಾಲ ಕನ್ನೆ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದರು.

ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ವಿಜಯಪುರ: ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು!

ವಸಂತ ನಾಡಿಗೇರ ಅವರ ವೃತ್ತಿ ಜೀವನದ ಹಿರಿತನದ ಸೇವೆ ಗುರುತಿಸಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಮೈಸೂರಿನಲ್ಲಿ ನಡೆದ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನ ಮಾಡಿತ್ತು. ಜೊತೆಗೆ ನಾಡಿಗೇರ ಅವರು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಹಲವಾರು ಕ್ಷೇತ್ರಗಳ ಗಣ್ಯರು ವಸಂತ್ ನಾಡಿಗೇರ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ನೋಡಿ: ಕೆಇಎ ಪರೀಕ್ಷೆ ಮುಂದೂಡಿ – ಪರೀಕ್ಷಾರ್ಥಿಗಳ ಆಗ್ರಹJanashakthi Media

Donate Janashakthi Media

Leave a Reply

Your email address will not be published. Required fields are marked *