ವಿಶ್ವವಿದ್ಯಾನಿಲಯದ ಉಪ ಕುಲಪತಿ ನೇಮಕದ ನಿರ್ಧಾರವನ್ನು ತನ್ನ ಸುಪರ್ದಿಗೆ ಪಡೆದ ರಾಜ್ಯ ಸರ್ಕಾರ

ಕಲಬುರಗಿ:  ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯದ ಉಪ ಕುಲಪತಿ ನೇಮಕದ ನಿರ್ಧಾರವನ್ನು  ಸುಪರ್ದಿಗೆ ಪಡೆಯುವ ಬಗ್ಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ  ನಿರ್ಧಾರ ಕೈಗೊಳ್ಳಲಾಗಿದೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ವಿಶ್ವವಿದ್ಯಾಲಯದ ಉಪ ಕುಲಪತಿ ನೇಮಕದ ತೀರ್ಮಾನ ಈ ಮೂಲಕ ಕೈಗೊಳ್ಳಲಾಗಿದೆ.

ಈ ಮೂಲಕ ಇದುವರೆಗೂ ರಾಜ್ಯಪಾಲರಿಗೆ ಇದ್ದ ಅಧಿಕಾರವನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಂತಾಗಿದೆ. ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ 2024’ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ಕುಲಪತಿ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶ ದೊರೆಯುತ್ತಿದೆ.

ಇದನ್ನು ಓದಿ : ಸಂಘಪರಿವಾರದ ರಾಜಕೀಯ ದಾಳ, ಕಾಂಗ್ರೆಸ್ ಪಕ್ಷದ ಮುಂದಾಳುಗಳು ಮೌನ

ಈಗಿರುವ ನಿಯಮಗಳ ಪ್ರಕಾರ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜ್ಯಪಾಲರೇ ಆಗಿರುತ್ತಾರೆ. ಉಪ ಕುಲಪತಿಗಳ ನೇಮಕ ಅವರ ವ್ಯಾಪ್ತಿಗೆ ಬರುತ್ತದೆ. ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ 2024’ ವಿಧಾನಸಭೆಯಲ್ಲಿ ಅನುಮೋದನೆಗೊಂಡರೆ ರಾಜ್ಯಪಾಲರ ಈ ಒಂದು ಅಧಿಕಾರ ಇಲ್ಲವಾಗುತ್ತದೆ. ಹೊರತುಪಡಿಸಿ ಇತರ ಅಧಿಕಾರಗಳು ಹಾಗೇ ಉಳಿಯುತ್ತವೆ.

ಮುಡಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕ್ಯಾಬಿನೆಟ್‌ನ ಕ್ರಮ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರು ಇದನ್ನು ವಿರೋಧಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದರು. ಜೊತೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಪಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಆಗ್ರಹಿಸಿದ್ದರು. ಇದಾದ ಕೆಲವು ದಿನಗಳ ನಂತರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ರಾಜ್ಯಪಾಲರು, 20-05-2023 ರಿಂದ, ಅಂದರೆ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಈವರೆಗೆ ಲೋಕಾಯುಕ್ತ ಸಂಸ್ಥೆಯಿಂದ ಸ್ವೀಕೃತವಾಗಿರುವ ಸ್ವೀಕೃತಗೊಂಡಿರುವ ಪ್ರಕರಣಗಳ ಮಾಹಿತಿ ನೀಡುವಂತೆ ಕೋರಿದ್ದರು.

ಇದನ್ನು ನೋಡಿ : ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು – ಸಿದ್ದರಾಮಯ್ಯ

Donate Janashakthi Media

Leave a Reply

Your email address will not be published. Required fields are marked *