ಬೆಂಗಳೂರು:ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಫಲಿತಾಂಶದ ಹೊರಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು.
ಇದನ್ನು ಓದಿ : ನಿರೀಕ್ಷಿಸಿದಷ್ಟು ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಿಲ್ಲ: ಸಿ.ಟಿ.ರವಿ
ಮತದಾರರು ನೀಡಿರುವ ನಿರ್ಣಯವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಜೊತೆಯಲ್ಲಿ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಸ ಇತ್ತು. ಆದರೆ, ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ ಎಂದು ಡಿ.ಕೆ ಸುರೇಶ್ ನೀಡಿದರು.
ಇದನ್ನು ನೋಡಿ : ಮಹಾರಾಷ್ಟ್ರದಲ್ಲಿ ಬಿಜೆಪಿಯ ತಂತ್ರ ಬ್ಯೂಮರಾಂಗ್ ಆಗುತ್ತಾ? ಹೌದು ಎನ್ನುತ್ತಿವೆ ಲೆಕ್ಕಾಚಾರಗಳು!?