ವಿಧಾನ ಮಂಡಲ ಅಧಿವೇಶನ: ನಾಲ್ಕು ವಿಧೇಯಕಗಳು ಅಂಗೀಕಾರ

ಬೆಂಗಳೂರು : ಪ್ರಸಕ್ತ ಸಾಲಿನ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು(ಸೆಪ್ಟಂಬರ್‌ 20) ನಾಲ್ಕು ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ. 2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ ವಿಧೇಯಕ) ಸೇರಿದಂತೆ ಪ್ರಮುಖ ವಿಧೇಯಕಗಳು ಅಂಗೀಕಾರ ಪಡೆದುಕೊಂಡಿದೆ.

2022ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ ವಿಧೇಯಕ), 2022ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ ವಿಧೇಯಕ), 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಎರಡನೇ ತಿದ್ದುಪಡಿ ವಿಧೇಯಕ)ವನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಮಂಡಿಸಿದರು. ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಕರ್ನಾಟಕ ಮುನ್ಸಿಪಾಲಿಟಿ ಕಾಯ್ದೆ (ತಿದ್ದುಪಡಿ)ಯನ್ನು ಮಂಡಿಸಿದರು.

ಈ ಎಲ್ಲ ವಿಧೇಯಕಗಳ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆ ನಡೆದು ನಂತರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕಗಳನ್ನು ಮತಕ್ಕೆ ಹಾಕಿ ಅಂಗೀಕರ ನೀಡಿದರು. ಕಂದಾಯ ಸಚಿವ ಆರ್.ಅಶೋಕ್ ಅವರು ಸದನದಲ್ಲಿ ಹಾಜರಿರದ ಕಾರಣ ಕರ್ನಾಟಕ ಭೂ ಕಬಳಿಕೆ ನಿಯಂತ್ರಣ (ತಿದ್ದುಪಡಿ ವಿಧೇಯಕ) ಅಂಗೀಕಾರಗೊಂಡಿಲ್ಲ.

Donate Janashakthi Media

Leave a Reply

Your email address will not be published. Required fields are marked *