ಬೆಂಗಳೂರು ನಗರದ ಪ್ರಮುಖ ಗುರುತು ವಿಧಾನಸೌಧ, ಈಗ ಹೊಸ ಆಧುನಿಕ ಪ್ರವಾಸೋದ್ಯಮ ವ್ಯವಸ್ಥೆಯನ್ನು ಪರಿಚಯಿಸಿದೆ. ವಿಧಾನಸೌಧ
ಪ್ರವಾಸೋಧ್ಯಮ ಇಲಾಖೆಯ ಮನವಿ ಮೇರೆಗೆ ಸರ್ಕಾರ ಷರತ್ತು ಬದ್ದ ಅನುಮತಿ ನೀಡಿದೆ. ನಿರ್ಧಿಷ್ಟ ಪ್ರವೇಶ ಶುಲ್ಕ ನೀಡಿ ಪ್ರವಾಸಿಗರು ವಿಧಾನಸೌಧ ನೋಡಲು ವ್ಯವಸ್ಥೆ ಮಾಡಲಾಗುತ್ತಿದೆ.
ವಿಧಾನಸೌಧ ಪ್ರವೇಶಕ್ಕೆ ಶುಲ್ಕ, ಷರತ್ತು ಮತ್ತು ನಿಬಂಧನೆಗಳು
ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಬೆಳಿಗ್ಗೆ 8.00 ರಿಂದ ಸಂಜೆ 6.00ರವರೆಗೆ ವಿಧಾನಸೌಧದ ವೀಕ್ಷಣೆಗೆ ಅವಕಾಶ ಇರಲಿದೆ. ಇದಕ್ಕಾಗಿ “Guided Tour” ವ್ಯವಸ್ಥೆ ಕಲ್ಪಿಸಲಾಗುತ್ತಿದೆ. Guided Tour ಗೆ ಅನುವಾಗುವಂತೆ ಪ್ರವಾಸಿಗರು Online ಮುಖಾಂತರ ticket ಪಡೆಯಲು ಪ್ರವಾಸೋದ್ಯಮ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿ ಪಡಿಸಲಾಗುತ್ತಿದೆ.
ಇದನ್ನೂ ಓದಿ;ತಮಿಳುನಾಡು ರಾಜ್ಯಪಾಲರನ್ನು ತರಾಟೆಗೆ ತೆಗೆದು ಕೊಂಡ ಸುಪ್ರೀಂ ಕೋರ್ಟ್ ವಿಧಾನಸೌಧ
ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರನ್ನು ತಲಾ 30 ರಂತೆ ತಂಡಗಳನ್ನಾಗಿ ವಿಭಜಿಸಿ, ವೀಕ್ಷಣೆಗೆ ಅವಕಾಶ ಕಲ್ಪಿಸುವುದು ಹಾಗೂ ಈ ಪ್ರತಿ ತಂಡಗಳ ಮೇಲ್ವಿಚಾರಣೆ ಮಾಡಲು ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಿಸಲಾಗುತ್ತದೆ.
ಇನ್ನು ವಿಧಾನಸೌಧ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ನಿಯಮಗಳನ್ನು ಪಾಲನೆ ಮಾಡಬೇಕಿದೆ. ಪ್ರವಾಸಿಗರ ಅಧಿಕೃತ ಗುರುತಿನ ಚೀಟಿಯನ್ನು ಪರಿಶೀಲಿಸಿದ ಬಳಿಕ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತದೆ. ವಿಧಾನಸೌಧ ಕಟ್ಟಡ, ಉದ್ಯಾನವನಗಳು, ಪ್ರತಿಮೆಗಳಿಗೆ ಯಾವುದೇ ದಕ್ಕೆ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈ ಕುರಿತು ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆಯು ಕ್ರಮವಹಿಸಲು ಸೂಚನೆ ನೀಡಲಾಗಿದೆ.
ಆದರೆ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿಗರಿಗೆ ಎಷ್ಟು ಶುಲ್ಕ ನಿಗದಿ ಮಾಡಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ವಿಧಾನಸೌಧಕ್ಕೆ ನಿತ್ಯ ಸಾರ್ವಜನಿಕರೂ ಆಗಮಿಸುತ್ತಾರೆ. ಆದರೆ ಇವರನ್ನು ಪ್ರವಾಸಿಗರು ಎಂದು ಪರಿಗಣಿಸಲಾಗುತ್ತಾ? ಎಂಬ ಕುತೂಹಲ ಕೆರಳಿಸಿದೆ. ಈ ಮೂಲಕ ವಿವಿಧ ಕೆಲಸ ಕಾರ್ಯಗಳಿಗೆ ಆಗಮಿಸುವ ಸಾರ್ವಜನಿಕರಿಗೂ ಶುಲ್ಕ ಕಟ್ಟಬೇಕಾದ ಅನಿವಾರ್ಯತೆ ಎದುರಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ.
ಇದನ್ನೂ ಓದಿ:ರಾಜ್ಯಪಾಲರಿಗೆ ಮಸೂದೆಗಳನ್ನು ತಡೆಯುವ ಅಧಿಕಾರವಿಲ್ಲ – ಸುಪ್ರೀಂಕೋರ್ಟ್‌ನ ಮಹತ್ವದ ತೀರ್ಪು ವಿಧಾನಸೌಧ