ವಿದ್ಯಾರ್ಥಿಗಳ ಬಸ್‌ಪಾಸ್ ಅವಧಿ ವಿಸ್ತರಣೆಗೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಬೆಂಗಳೂರು: ವಿದ್ಯಾರ್ಥಿ ಬಸ್ ಪಾಸ್ ಅವಧಿಯು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಆದರೆ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನೂ ನಡೆಯುತ್ತಿದ್ದು, ಪರೀಕ್ಷೆಗಳೂ ಹತ್ತಿರದಲ್ಲೇ ಇದೆ. ಈ ನಡುವೆ ವಿದ್ಯಾರ್ಥಿಗಳು ಪರೀಕ್ಷೆಯ ತಯಾರಿಯಲ್ಲಿದ್ದಾರೆ. ಸಾರಿಗೆ ಇಲಾಖೆಯು ವಿದ್ಯಾರ್ಥಿಗಳ ಬಸ್‌ ಪಾಸ್‌ ಅವಧಿ ವಿಸ್ತರಣೆಗೆ ಮುಂದಾಗದಿರುವ ಕ್ರಮವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌(ಎಸ್‌ಎಫ್‌ಐ) ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಬಿಎಂಟಿಸಿ ವಿದ್ಯಾರ್ಥಿ ಬಸ್‌ಪಾಸ್ ಅವಧಿಯನ್ನು ವಿಸ್ತರಣೆ ಮಾಡಲು ಒತ್ತಾಯಿಸಿ ಇಂದು(ಸೆಪ್ಟಂಬರ್‌ 03) ಬೆಂಗಳೂರು ನಗರದ ಕಾರ್ಪೋರೇಷನ್ ವೃತ್ತದ ಬಳಿ ಬಸ್ ತಡೆದು ಪ್ರತಿಭಟನೆ ನಡೆಸಿದರು. ಬಳಿಕ ಬಿ.ಎಂ.ಟಿ.ಸಿ ಕೇಂದ್ರ ಕಛೇರಿ ಬಳಿ ಪ್ರತಿಭಟನೆ ನಡೆಸಿದರು.

ಸಾರಿಗೆ ಇಲಾಖೆಯು ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಿ ಕೆಎಸ್​ಆರ್​ಟಿಸಿ ಆದೇಶಿಸಿದೆ. ಬಿಎಂಟಿಸಿ ಸಂಸ್ಥೆಯೂ ಸಹ ವಿದ್ಯಾರ್ಥಿಗಳ ಬಸ್‌ಪಾಸ್‌ ಅವಧಿ ವಿಸ್ತರಿಣೆ ಮಾಡಬೇಕೆಂದು ಆಗ್ರಹಿಸಲಾಯಿತು. ಇದರ ಪರಿಣಾಮವಾಗಿ ವಿದ್ಯಾರ್ಥಿ ಬಸ್‌ಪಾಸ್ ನ್ನು 15 ಸೆಪ್ಟೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಶಿವಕುಮಾರ್ ಮ್ಯಾಗಳಮನಿ, ದಿಲೀಪ್, ಜಂಟಿ ಕಾರ್ಯದರ್ಶಿ ಭೀಮನಗೌಡ ಹಾಗೂ ಎಸ್‌ಎಫ್‌ಐ ಬೆಂಗಳೂರು ಜಿಲ್ಲಾ ಸಮಿತಿ ಮುಖಂಡರಾದ ಅಭಿಷೇಕ್, ವೆಂಕಟೇಶ್,  ಉದಯ್  ಹಾಗೂ ದಲಿತ ವಿದ್ಯಾರ್ಥಿ ಪರಿಷತ್‌(ಡಿವಿಪಿ) ಸಂಘಟನೆ ಮುಖಂಡರಾದ ಅಕ್ಷಯ್ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Donate Janashakthi Media

Leave a Reply

Your email address will not be published. Required fields are marked *