ಶೈಕ್ಷಣಿಕ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕೋಲಾರ : ಪದವಿ ವಿದ್ಯಾರ್ಥಿಗಳ ವಿವಿಧ ಶೈಕ್ಷಣಿಕ ಬೇಡಿಕೆಗಳು ಈಡೇರಿಕೆಗಾಗಿ ಒತ್ತಾಯಿಸಿ ಎಸ್ಎಫ್ಐ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮುಂದೆ ಬುಧವಾರ  ಪ್ರತಿಭಟನಾ ಧರಣಿ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಎಫ್ಐ ತಾಲ್ಲೂಕು ಅಧ್ಯಕ್ಷ ಶ್ರೀಕಾಂತ್ ಮಾತನಾಡಿ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದರ ವ್ಯಾಪ್ತಿಗೆ ಬರುವ ಮಂಗಸಂದ್ರ  ಸ್ನಾತಕೋತ್ತರ ಕೇಂದ್ರ,  ಸರ್ಕಾರಿ ಮಹಿಳಾ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಖಾಯಂ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗುತ್ತಿದೆ ಇದರಿಂದ ವಿಧ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಸರಿಯಾದ ರೀತಿಯಲ್ಲಿ ಭೋದನೆ ಇಲ್ಲವಾಗಿದೆ ಎಂದು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು

ಕಾಲೇಜುಗಳಲ್ಲಿ ಬಹುತೇಕ ಕೋರ್ಸುಗಳ ವಿಭಾಗ ಮುಖ್ಯಸ್ಥರು ಸಹ ಕಾಯಂ ಉಪನ್ಯಾಸಕರಿಲ್ಲ ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಸಿಗುತ್ತಿಲ್ಲ. ಉಪನ್ಯಾಸಕರಿಲ್ಲ ಹೀಗಿದ್ದರೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ಸರಿಯಾದ ಬೆಳವಣಿಗೆ ಅಲ್ಲ ಆದ್ದರಿಂದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಕಾಲೇಜುಗಳಲ್ಲಿ ಅಗತ್ಯವಿರುವ ಎಲ್ಲ ಕಾಯಂ ಉಪನ್ಯಾಸಕರನ್ನು ಈ ಕೂಡಲೇ ನೇಮಕಾತಿ ಮಾಡಬೇಕು ಒತ್ತಾಯಿಸಿದರು.

ತಾಲ್ಲೂಕು ಕಾರ್ಯದರ್ಶಿ ಅಂಕಿತಾ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರಿಗೆ ವೇತನ ಸಮಸ್ಯೆ ಮತ್ತು ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು ಕೋವಿಡ್ ಹಿನ್ನಲೆಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಇತರೆ ವಿವಿಗಳ ಮಾದರಿಯಲ್ಲಿ ಪದವಿ ವಿಧ್ಯಾರ್ಥಿಗಳಿಗೆ ಪಠ್ಯಕ್ರಮ ಕಡಿತಗೊಳಿಸಬೇಕು. ಸರ್ಕಾರ ನಿಗದಿಪಡಿಸಿರುವ ಮಾರ್ಗದರ್ಶಿ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಈ ಕೂಡಲೇ  ಪ್ರಥಮ ಮತ್ತು ದ್ವೀತಿಯ ವರ್ಷದ ಪದವಿ ವಿದ್ಯಾರ್ಥಿಗಳಿಗೂ ತರಗತಿಗಳು ಪ್ರಾರಂಭಿಸಬೇಕು. ವಿದ್ಯಾರ್ಥಿಗಳ ಈ ಎಲ್ಲ ಶೈಕ್ಷಣಿಕ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಬೇಕು ಇಲ್ಲದೇ ಹೋದರೆ ಎಸ್ಎಫ್ಐ ನಿಂದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಎದುರು ಸಾವಿರಾರು ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಎಸ್.ಎಫ್.ಐ ತಾಲೂಕು ಮುಖಂಡರಾದ ಭರತ್, ಆನಂದ್, ಬಾಲಾಜಿ , ವೆಂಕಟಾದ್ರಿ, ಕಾವ್ಯ,ಕೌಶಿಕ, ನಯನ, ಶ್ರವಂತಿ ಮುಂತಾದವರು ವಹಿಸಿದ್ದರು.

Donate Janashakthi Media

One thought on “ಶೈಕ್ಷಣಿಕ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Leave a Reply

Your email address will not be published. Required fields are marked *