ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುಲು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಕುಷ್ಟಗಿ,ಫೆ.18 : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಬಿಡಲು ಮತ್ತು ಹಾಸ್ಟೆಲ್ ಅರ್ಜಿ ಹಾಕಿದವರಿಗೆ ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಶಾಸಕರ ಕಾರ್ಯಾಲಯದ ಮುಂದೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್. ಎಫ್. ಐ)  ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಳೆದ ತಿಂಗಳಿನಿಂದ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಉತ್ತಮ ಗುಣ ಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಪಟ್ಟಣಕಡೆ ಪ್ರಯಾಣ ಬೆಳಸುತ್ತಿದ್ದಾರೆ. ಕುಷ್ಟಗಿ ಮತ್ತು ಗಜೇಂದ್ರಗಡ, ಇಲಕಲ್ಲ, ಇತರೆ ಕಡೆ ತಮ್ಮ ಶೈಕ್ಷಣಿಕ ದೃಷ್ಟಿಯಿಂದ ದಿನನಿತ್ಯ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಾರೆ ಆದರೆ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್ಸುಗಳೇ ಇರದ ಕಾರಣ ಹಲವಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಮತ್ತು ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್ ಗಳ ಮೇಲೆ ಅವಲಂಬಿತರಾಗಿರುತ್ತಾರೆ. ಆದ್ದರಿಂದ ಹಾಸ್ಟೆಲ್ ಬೇಕೆಂದು ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಂದರೆ SC.ST.OBC ಅಲ್ಪಸಂಖ್ಯಾತ ವರ್ಗದ  ಸಮುದಾಯದ ಎಲ್ಲಾ ವಿದ್ಯಾರ್ಥಿಗಳಿಗೆ  ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಹಾಸ್ಟೆಲ್ ಗಳನ್ನು ಕೊಡಬೇಕೆಂದು ಎಸ್ಎಫ್ಐ ರಾಜ್ಯ ಅಧ್ಯಕ್ಷರಾದ ಅಮರೇಶ ಕಡಗದ ಆಗ್ರಹಿಸಿದರು.

ಖಾಸಗಿ ಶಾಲೆಗಳ ದುಬಾರಿ ಶುಲ್ಕ ವಸೂಲಾತಿಗೆ ಕಡಿವಾಣ ಹಾಕಲು ವಿದ್ಯಾರ್ಥಿಗಳ ಆಗ್ರಹ

ಬಹುತೇಕ ಸರಕಾರಿ ಶಾಲಾ ಕಾಲೇಜುಗಳಲ್ಲಿ ಶುದ್ಧವಾದ ಕುಡಿಯುವ ನೀರು ಇಲ್ಲ, ಉಪನ್ಯಾಸಕರ ಕೊರತೆ,  ಬಸ್ ಸಮಸ್ಯೆ ಹೀಗೆ ಹತ್ತು ಹಲವಾರು ಸಮಸ್ಯೆಗಳು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಶಾಸಕರ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡಿ ಶಾಸಕ ಅಮರೇಗೌಡ ಬಯ್ಯಾಪುರ ರವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್.ಎಫ್.ಐ ತಾಲೂಕು ಸಂಚಾಲಕರಾದ ಬಸವರಾಜ ಸಾರಥಿ, ಸಹ ಸಂಚಾಲಕ ಹುಸೇನ್ ಬನ್ನಿಗೋಳ, ಹನುಮಂತ ಎಚ್, ಮೈನುದ್ದಿನ್ ಮುಲ್ಲಾ, ಮಂಜುನಾಥ್ ಕುರಿ, ನಾಗನಗೌಡ ಪೊಲೀಸ್ ಪಾಟೀಲ್, ರವಿಕುಮಾರ ತುಪ್ಪದ್, ಹನುಮೇಶ, ರಮೇಶ, ಶಂಕರಲಿಂಗ ಮುಂತಾದವರು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *