ಮುಳಬಾಗಿಲು: ನಗರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿನಿಯರು, ಹೆಣ್ಣು ಮಕ್ಕಳಿಗೆ ಶಾಲಾ ಕಾಲೇಜುಗಳಿಗೆ ಹೋಗಿ ಬರುವ ಸಮಯದಲ್ಲಿ ಕೆಲ ಪುಂಡಪೋಕರಿಗಳು, ಬೀದಿ ಕಾಮಣ್ಣರಿಂದ ಕಿರುಕುಳ ನಡೆಯುತ್ತಿದೆ.
ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸಿ ಹೆಣ್ಣು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮುಖಂಡರು ನಗರ ಆರಕ್ಷಕ ಉಪ ನಿರೀಕ್ಷಕ ಸೀತಪ್ಪ ರವರಿಗೆ ಮನವಿ ಸಲ್ಲಿಸಿದರು.
ಕೆಲ ಪುಂಡರು ಶಾಲಾ ಕಾಲೇಜುಗಳು ಬಿಡುವ ಸಮಯದಲ್ಲಿ ರಸ್ತೆ ಬದಿಯಲ್ಲಿ, ನೇತಾಜಿ ಕ್ರೀಡಾಂಗಣ, ಬಸ್ ನಿಲ್ದಾಣ, ಮುತ್ಯಾಲಪೇಟೆ ಮಾರ್ಗದಲ್ಲಿ ನಡೆದುಕೊಂಡು ಬರುವ ವಿದ್ಯಾರ್ಥಿನಿಯರನ್ನು ವಕ್ರದೃಷ್ಟಿಯಿಂದ ನೋಡುವುದು, ಸನ್ನೆ ಮಾಡುವುದು, ಹಿಂಬಾಲಿಸಿ ಬೈಕ್ ನಲ್ಲಿ ಬರುವುದು, ಈ ರೀತಿಯ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿನಿಯರು , ಹೆಣ್ಣು ಮಕ್ಕಳು ಮಾನಸಿಕವಾಗಿ ಹಿಂಸೆ ಎದುರಿಸುತ್ತಿದ್ದಾರೆ.
ಆದ್ದರಿಂದ ಪುಂಡರ ಮೇಲೆ ಪೊಲೀಸ್ ಇಲಾಖೆ ನಿಗಾವಹಿಸಲು ಇಲಾಖೆಯು ಪೊಲೀಸ್ ಸಿಬ್ಬಂದಿಗಳು ಗಸ್ತು ಹೊಡೆದು ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ. ಸಿಸಿ ಕ್ಯಾಮರಾಗಳ ಅಳವಡಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಸಹ ಆಗ್ರಹಿಸಿದ್ದಾರೆ. ಕೂಡಲೇ ಕ್ರಮವಹಿಸದಿದ್ದರೆ, ಪ್ರತಿಭಟನೆಗೆ ಮುಂದಾಗುವುದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ವಿಜಯಕುಮಾರಿ.ಆರ್., ಎಸ್ಎಫ್ಐ ತಾಲ್ಲೂಕು ಅಧ್ಯಕ್ಷ ಅಣ್ಣೆಹಳ್ಳಿ ಸುರೇಶ್ ಬಾಬು, ಡಿವೈಎಫ್ಐ ಮುಖಂಡ ಕೇರಳ ಶ್ರೀನಿವಾಸ್, ಎಸ್ಎಫ್ಐ ಕಾರ್ಯಕರ್ತರಾದ ಗೋಪಿ, ಸಂದೀಪ್, ಸ್ವಾತಿ ಹಾಜರಾಗಿದ್ದರು.
Super… S F I
ಅನ್ಯಾಯದಲ್ಲಿ ನ್ಯಾಯ ಹುಡುಕುವುದು SFI ✊️✊️✊️…