ವಿದ್ಯಾಸಿರಿ ವಿದ್ಯಾರ್ಥಿವೇತನ ಮೊತ್ತ 1,500 ರೂ. ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯಾಸಿರಿ ವಿದ್ಯಾರ್ಥಿವೇತನ ಮೊತ್ತವನ್ನು 1,500 ರೂ. ಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನ 1,500 ರೂ.ಗಳಿಂದ ಮುಂದಿನ ವರ್ಷದಿಂದ ಎರಡು ಸಾವಿರಕ್ಕೆ ಏರಿಸಲಾಗುವುದು ಎಂದರು. ವಿದ್ಯಾಸಿರಿ

ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ, ಸಿದ್ದಾರ್ಥನಗರ, ಮೈಸೂರು ಇವರ ವತಿಯಿಂದ ಸಿದ್ದಾರ್ಥನಗರದ ಕನಕಭವನದಲ್ಲಿ ಆಯೋಜಿಸಿದ್ದ ‘ಶ್ರೀ ಭಕ್ತ ಕನಕದಾಸರ 537ನೇ ಜಯಂತ್ಯುತ್ಸವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೀವನದ ಅನುಭವದಿಂದ ಮೂಡಿಬಂದ ಯೋಜನೆಗಳು ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರೌಢಶಾಲೆಗೆ ಬರುವವರೆಗೂ ನಾನು ಚಪ್ಪಲಿಯನ್ನು ಹಾಕಿಕೊಳ್ಳುತ್ತಿರಲಿಲ್ಲ. ಎಲ್ಲಾ ಶಾಲಾ ಮಕ್ಕಳು ಶೂ ಹಾಕಬೇಕೆಂದು ಶೂಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ರಾಜ್ಯದಲ್ಲಿ ಹೆಚ್ಚುವರಿ ಹಾಲು ಉತ್ಪಾದನೆಯಾದ ಸಂದರ್ಭದಲ್ಲಿ ಶಾಲೆ ಮಕ್ಕಳಿಗೆ ಹಾಲು ಕೊಡಲಾಯಿತು. ಪ್ರಸ್ತುತ ವಾರದಲ್ಲಿ ಆರು ದಿನಗಳು ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ. ಈ ಕಾರ್ಯಕ್ರಮಗಳು ಜೀವನದ ಅನುಭವದಿಂದ ಮೂಡಿಬಂದಿದ್ದು ಎಂದರು.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಹಿನ್ನಡೆ?

ಶೇಕಡ 90 ಅಂಕಗಳನ್ನು ಪಡೆಯುವುದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಸಾಧ್ಯ. ಅದಕ್ಕಾಗಿ ಅವರು ಸಾಕಷ್ಟು ಶ್ರಮವಹಿಸಿರುತ್ತಾರೆ. ನಾನು ಕೂಡಾ ಹತ್ತನೇ ತರಗತಿವರೆಗೆ ವಿದ್ಯಾವರ್ಧಕ ಶಾಲೆಯಲ್ಲಿ ಮೊದಲಿಗನಾಗಿದ್ದೆ . ನಂತರ ಪಿಯುಸಿ ತರಗತಿಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಆಯ್ದುಕೊಂಡಿದ್ದರಿಂದ ಸ್ವಲ್ಪ ಶ್ರಮ ವಹಿಸಬೇಕಾಯಿತು. ಪಿಯುಸಿ ಹಾಗೂ ಬಿ ಎಸ್ ಸಿ ಮತ್ತು ಲಾ ವ್ಯಾಸಂಗವನ್ನು ಸೆಕೆಂಡ್ ಕ್ಲಾಸಿನಲ್ಲಿ ಪಾಸ್ ಮಾಡಿದೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಒಮ್ಮೆಯೂ ಫೇಲ್ ಆಗಲಿಲ್ಲ. ಶಿಕ್ಷಕರು ಮಾಡುವ ಪಾಠವನ್ನು ಆಯಾಯ ದಿನದಂದೇ ಅಭ್ಯಾಸ ಮಾಡಬೇಕು. ಪ್ರತಿದಿನ ಐದಾರು ಗಂಟೆಗಳ ಕಾಲ ಅಭ್ಯಾಸ ಮಾಡಬೇಕು.

ಶಿಕ್ಷಣ ಹಾಗೂ ಪ್ರತಿಭೆ ಯಾರ ಅಥವಾ ಯಾವ ಜಾತಿ ಸ್ವತ್ತು ಅಲ್ಲ . ವಿವೇಕಾನಂದರು ಹೇಳಿದಂತೆ ಸುಪ್ತವಾದ ಪ್ರತಿಭೆಯನ್ನು ವಿಕಸನಗೊಳಿಸುವುದೇ ಶಿಕ್ಷಣ. ಹಿಂದುಳಿದ ವರ್ಗಗಳು 2ಎ ಕೆಟಗರಿಗೆ ಸೇರುತ್ತವೆ ಆದರೆ ಇದನ್ನು ಮೀರಿ ಮೆರಿಟ್ ನಲ್ಲಿ ಅಂಕ ಗಳಿಸಿ ಸೀಟ್ ಪಡೆಯಲು ಪ್ರಯತ್ನಿಸಬೇಕು, ಅದಕ್ಕಾಗಿ ಶ್ರಮವಹಿಸಬೇಕು.

ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಲ್ಲಿ ಅವರು ಹೆಚ್ಚು ಅಂಕಗಳನ್ನು ತೆಗೆಯಲು ಸಹಕಾರಿಯಾಗುತ್ತದೆ. ಜೀವನದಲ್ಲಿ ಮೇಲೆ ಬಂದ ಮೇಲೆ ನಡೆದು ಬಂದ ಹಾದಿಯನ್ನು ಮರೆಯಬಾರದು, ಸಮಾಜದಲ್ಲಿ ತುಳಿತಕ್ಕೊಳಗಾದವರ, ಅವಕಾಶ ವಂಚಿತರ ಸೇವೆ ಮಾಡಬೇಕು. ಹುಟ್ಟು ಆಕಸ್ಮಿಕ – ಸಾವು ನಿಶ್ಚಿತ, ಇವೆರಡರ ನಡುವಿನ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ಇದನ್ನೂ ನೋಡಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ, ಆರ್ ಡಿಪಿಆರ್ ಇಲಾಖೆಗಳ ಕಾರ್ಯ ನಿರ್ವಹಣೆಯ ಆಳ ಅಗಲ.. Janashakthi Media

Donate Janashakthi Media

Leave a Reply

Your email address will not be published. Required fields are marked *