ಬೆಂಗಳೂರು: ನಿರಂತರವಾಗಿ ಒಂದಿಲ್ಲೊಂದು ಬೆಲೆ ಏರಿಕೆಯಲ್ಲಿ ಹೈರಾಣಾಗಿದ್ದಾರೆ. ದಿನನಿತ್ಯ ಏರುತ್ತಿರುವ ಪೆಟ್ರೋಲ್ ಬೆಲೆ ಏರಿಕೆಯ ನಡುವೆಯೇ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಏರಿಕೆ ಪ್ರಸ್ತಾಪಯಿದ್ದು, ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ ಗೃಹೋಪಯೋಗಿ ವಿದ್ಯುತ್ ಪ್ರತಿ ಯೂನಿಟ್‍ಗೆ 10ರಿಂದ 20 ಪೈಸೆ, ವಾಣಿಜ್ಯ ಬಳಕೆ ಯೂನಿಟ್‍ಗೆ 15ರಿಂದ 25 ಪೈಸೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆ ಇದೆ. 1 ರೂಪಾಯಿ 50 ಪೈಸೆ ಹೆಚ್ಚಳಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ದರ ಏರಿಕೆ ಸಂಬಂಧ ಕೆಇಆರ್‌ಸಿ ಇಂದು ಸುದ್ದಿಗೋಷ್ಠಿ ಕರೆದಿದೆ. ಬೆಂಗಳೂರಿನ ವಸಂತನಗರದಲ್ಲಿರುವ ಕೆಇಆರ್‌ಸಿ ಕಚೇರಿಯಲ್ಲಿ ಅಧ್ಯಕ್ಷ ಎಚ್.ಎಂ.ಮಂಜುನಾಥ್, ಸುದ್ದಿಗೋಷ್ಠಿ ನಡೆಸಲಿದ್ದು ದರ ಏರಿಕೆ ಸಂಬಂಧ ಮಾಹಿತಿ ನೀಡಲಿದ್ದಾರೆ.
ಯಾವ ವರ್ಷ ಎಷ್ಟೆಷ್ಟು ದರ ಪರಿಷ್ಕರಣೆಯಾಗಿತ್ತು..?
– 2009 ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ ಹೆಚ್ಚಳ
– 2010 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ
– 2011 ರಲ್ಲಿ ಪ್ರತಿ ಯೂನಿಟ್ ಗೆ 28 ಪೈಸೆ ಹೆಚ್ಚಳ
– 2012 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೆಚ್ಚಳ
– 2013 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೆಚ್ಚಳ
– 2017 ರಲ್ಲಿ ಪ್ರತಿ ಯೂನಿಟ್ ಗೆ 48 ಪೈಸೆ ಹೆಚ್ಚಳ
– 2019 ರಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ
– 2020 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ