ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳಿ; ಕಾಂಗ್ರೆಸ್‌ಗೆ ವಿಜಯ್ ತಂದೆ ಆಹ್ವಾನ

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ತಂದೆ ಎಸ್ ಎ ಚಂದ್ರಶೇಖರ್ ಅವರು ಕಾಂಗ್ರೆಸ್‌ ಪಕ್ಷಕ್ಕೆ ಟಿವಿಕೆ ಜೊತೆ ಮೈತ್ರಿ ಮಾಡಿಕೊಳ್ಳುವಂತೆ ಆಹ್ವಾನ ನೀಡಿದ್ದಾರೆ ಎಂದು ವರದಿಯಾಗಿದೆ. ಜೊತೆ

ತಮಿಳುನಾಡಿನಲ್ಲಿ ಬಹುತೇಕ ಅತಂತ್ರ ಫಲಿತಾಂಶ ಬುರುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಇತರ ಪಕ್ಷಗಳನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ತನ್ನ ಮತಗಳನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ವಿರುದ್ಧ ಮೇ 7ರಂದು ರಾಜ್ಯವ್ಯಾಪಿ ಪ್ರತಿಭಟನೆ

ರಾಜ್ಯದಲ್ಲಿ ಬದಲಾಗುತ್ತಿರುವ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಮತ್ತೆ ಪುಟಿದೇಳಲು ಹೊಸ ಮೈತ್ರಿ ಅಗತ್ಯವೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಮಿಳುನಾಡಿನಲ್ಲಿ ಉಂಟಾಗುತ್ತಿರುವ ಚುನಾವಣಾ ಪ್ರವೃತ್ತಿಗಳನ್ನು ಉಲ್ಲೇಖಿಸಿದ ಅವರು, ಚುನಾವಣೆಯ ನಂತರ ರಾಜಕೀಯ ಮೈತ್ರಿ ಸಾಧ್ಯತೆಯನ್ನು ಸೂಚಿಸಿದ್ದೂ, ಅಧಿಕಾರ ಹಂಚಿಕೊಳ್ಳಲು ವಿಜಯ್ ಸಿದ್ಧರಾಗಿದ್ದಾರೆ. ಟಿವಿಕೆ-ಕಾಂಗ್ರೆಸ್ ಮೈತ್ರಿ ಎರಡೂ ಪಕ್ಷಗಳಿಗೆ ಲಾಭದಾಯಕವಾಗಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ನೋಡಿ: ಮೇ ದಿನ | ದುಡಿಯುವ ಕೈಗಳ ಹಕ್ಕಿನ ಘೋಷಣೆ | ವಿಶ್ಲೇಷಣೆ – ಎಸ್ ವರಲಕ್ಷ್ಮಿ Janashakthi Media

Donate Janashakthi Media

Leave a Reply

Your email address will not be published. Required fields are marked *