ತೆರೆದ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮ : ಮುಂದುವರಿದ ಕಾರ್ಯಾಚರಣೆ

ವಿಜಯಪುರ : ಆಟವಾಡುತಿದ್ದ ವೇಳೆ ತೆರೆದಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗುವೊಂದು ಆಯಾತಪ್ಪಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಸಂಭವಿಸಿದೆ. ಸತತ 12 ಗಂಟೆಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ರಕ್ಷಣಾ ತಂಡ ಮಗುವನ್ನು ಹೊರತೆಗೆಯಲು ಪ್ರಯತ್ನಿಸುತ್ತಿದೆ.

2 ವರ್ಷದ ಬಾಲಕ ಸಾತ್ವಿಕ್​ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಾನೆ. ಮಗುವಿನ ಕಾಲುಗಳ ಅಲುಗಾಟ ದೃಶ್ಯದಲ್ಲಿ ಸೆರೆಯಾಗಿದ್ದು, ಬಾಲಕ ಜೀವಂತವಾಗಿ, ಸುರಕ್ಷಿತವಾಗಿ ಹೊರತರಲು ಪ್ರಯತ್ನಿಸುತ್ತಿದ್ದು, ಆರೋಗ್ಯಾಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ತಲೆಕೆಳಗಾಗಿ ಬಾವಿಗೆ ಬಿದ್ದ ಮಗು

ಭೀಕರದ ಬರದಿಂದಾಗಿ ಬತ್ತಿದ ಭೀಮಾ ದಡದಲ್ಲಿ ಜೀವ ಜಲಕ್ಕಾಗಿ ಮಗುವಿನ ಪೋಷಕರು ಕೊಳವೆ ಬಾವಿ ತೆಗೆಸಿದ್ದರು. ನಿನ್ನೆಯಷ್ಟೇ 180 ಅಡಿಯಷ್ಟ ಕೊಳವೆ ಬಾವಿ ಕೊರೆಯಲಾಗಿತ್ತು. 180 ಅಡಿಗೆ ಏರ್ ಪಾಸ್ ಆಗಿ ಪಾಯಿಂಟ್ ವಿಫಲವಾಗಿತ್ತು, ಹೀಗಾಗಿ ಪಕ್ಕದಲ್ಲಿ 480 ಅಡಿಯಷ್ಟು ಮತ್ತೊಂದು ಕೊಳವೆ ಬಾವಿ ಕೊರೆಯಲಾಗಿತ್ತು. ಅದರಲ್ಲಿ ನೀರು ಸಿಕ್ಕಿದ್ದರಿಂದ ಸಂಜೆ ಮೋಟರ್ ಇಳಿಸುವ ಕಾರ್ಯ ಮಾಡಲಾಗಿತ್ತು. ಮಗು ಪಕ್ಕದಲ್ಲಿ ಕೊರೆದ ಕೊಳವೆ ಬಾವಿಗೆ ತಲೆ ಕೆಳಗಾಗಿ ಬಿದ್ದಿದೆ. ವಿಫಲವಾದ ಕೊಳವೆ ಬಾವಿ ಮುಚ್ಚದೆ ಹಾಗೆ ಬಿಟ್ಟಿದ್ದರು.

ಸದ್ಯ ಮಗು 16 ಅಡಿ ವರೆಗೂ ಕೆಸಿಂಗ್ ಪೈಪ್ ಹಾಕಿ ಡ್ರಿಲ್ ಮಾಡಿದ್ದರಿಂದ ಅಲ್ಲಿಗೆ ಮಗು ಸಿಲುಕಿದೆ. ಸದ್ಯ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದ್ದು ಕ್ಯಾಮೆರಾ ಮೂಲಕ ಮಗುವಿನ ಚಲನವಲನ ಗಮನಿಸಲಾಗುತ್ತಿದೆ. ಕೊಳವೆ ಬಾವಿಯ ಮೂರು ದಿಕ್ಕಿನಲ್ಲಿ ಜೆಸಿಬಿ ಮೂಲಕ ಭೂಮಿ ಅಗೆಯುತ್ತಿದ್ದಾರೆ. ಸದ್ಯ ಕಾರ್ಯಾಚರಣೆಗೆ ಬಂಡೆ ಅಡ್ಡಿಯಾಗಿದ್ದು, ಕಲ್ಲನ್ನು ಒಡೆಯುವ ಕಾರ್ಯ ಮಾಡಲಾಗುತ್ತಿದೆ.

 

Donate Janashakthi Media

Leave a Reply

Your email address will not be published. Required fields are marked *