ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯ ತೀರ್ಪು ನೀಡಿದೆ. ಯೋಗೇಶ್

ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಿ‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಏ. 15ರಂದು ತೀರ್ಪು ನೀಡಿದ್ದರಲ್ಲದೆ, ಶಿಕ್ಷೆಯ ಪ್ರಮಾಣ ನಿಗದಿಪಡಿಸಲು ಪ್ರಕರಣದ ವಿಚಾರಣೆಯನ್ನು ಏ. 16ರಕ್ಕೆ ಮುಂದೂಡಿದ್ದರು. ಇದೀಗ ತೀರ್ಪು ಪ್ರಕಟವಾಗಿದೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಗೆ ವಿಧಿಸಿರುವ ಷರತ್ತುಗಳನ್ನು ತಿರಸ್ಕರಿಸಿದ ಮಹಿಳಾ ಸಂಘಟನೆಗಳು

ಈ ಪ್ರಕರಣದಲ್ಲಿ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದೇ ವೇಳೆ ಯೋಗೇಶ್ ಗೌಡ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ವಿನಯ್ ಕುಲಕರ್ಣಿಗೆ ಸೂಚಿಸಿದ್ದಾರೆ.

ಇದನ್ನೂ ನೋಡಿ: SC ಒಳಮೀಸಲಾತಿ| ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಸಿಪಿಐ(ಎಂ) ಆಗ್ರಹ Janashakthi Media

Donate Janashakthi Media

Leave a Reply

Your email address will not be published. Required fields are marked *