ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡೇಟಿಗೆ ಮಹಿಳೆ ಸಾವು

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್‌ನಲ್ಲಿ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಇಂಫಾಲದ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಕೋರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದರ ಜತೆಗೆ, ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದು, ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ ಸುತ್ತಮುತ್ತಲಿನ ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಮೃತ ಮಹಿಳೆ ನಾಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಮಣಿಪುರ: ಶಾಲೆಯ ಬಳಿ ಮಹಿಳೆಯ ಗುಂಡಿಕ್ಕಿ ಹತ್ಯೆ

ಹಿಂಸಾಚಾರದಿಂದಾಗಿ ಸುದೀರ್ಘ ಅವಧಿಗೆ ಮುಚ್ಚಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಶುಕ್ರವಾರವಷ್ಟೇ ಮರಳಿ ಕಾರ್ಯಾರಂಭ ಮಾಡಿದ್ದವು. ಇದಾದ ನಂತರ ಒಂದು ದಿನದ ಅವಧಿಯಲ್ಲಿ ಪಶ್ಚಿಮ ಇಂಫಾಲ್ ಜಿಲ್ಲೆಯ ಶಾಲೆಯೊಂದರ ಹೊರಗೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದರಿಂದ ಮತ್ತೆ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮೂರು ಸರಕು ಸಾಗಾಣಿಕಾ ಟ್ರಕ್ ಗಳಿಗೆ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Donate Janashakthi Media

Leave a Reply

Your email address will not be published. Required fields are marked *