ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಗುಂಡಿನ ದಾಳಿ ವಾಹನಗಳಿಗೆ ಬೆಂಕಿ

Please follow and like us:

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ ಎಂದು ಅಲ್ಲಿನ ಅಧಿಕಾರಿಗಳು  ತಿಳಿಸಿದ್ದಾರೆ.

ಐತಿಹಾಸಿಕ ಕಂಗ್ಲಾ ಕೋಟೆ ಬಳಿಯ ಮಹಾಬಲಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲು ನಾಲ್ಕು ಚಕ್ರಗಳ ವಾಹನಗಳನ್ನು ಬಳಸಲಾಗುತ್ತಿದೆ ಎಂದು ಶಂಕಿಸಿ ಜನರ ಗುಂಪೊಂದು ಎರಡು ಖಾಸಗಿ ವಾಹನಗಳನ್ನು ಸುಟ್ಟು ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಣಿಪುರ ಹಿಂಸಾಚಾರ: ರೈಲು ಸಂಚಾರ, ಇಂಟರ್ನೆಟ್ ಸ್ಥಗಿತ

ಪೊಲೀಸರು ಮಧ್ಯ ಪ್ರವೇಶಿಸಿ ಗುಂಪು ಚದುರಿಸಿದ್ದು, ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಇನ್ನು ಶುಕ್ರವಾರ ತಡರಾತ್ರಿ ಇಂಫಾಲ್ ಪಶ್ಚಿಮ ಜಿಲ್ಲೆಯ ಯಂಗಂಗ್‌ಪೋಕ್ಪಿ ಬಳಿಯ ಲೈಕೋಟ್‌ನಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಿಷ್ಣುಪುರ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಣಿಪುರ ಪೊಲೀಸ್ ಕಮಾಂಡೋ ಸೇರಿದಂತೆ ನಾಲ್ವರು ಗುಂಡಿಕ್ಕಿ ಹತ್ಯೆ ಮಾಡಿದ ನಂತರ ಈ ಘಟನೆಗಳು ನಡೆದಿವೆ ಎಂಬ ಮಾಹಿತಿ ತಿಳಿದುಬಂದಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *