ಕಲ್ಬುರ್ಗಿ: ಜುಲೈ 17 ರಂದು ಎಸ್‌ಎಫ್ಐ ಅಖಿಲ ಭಾರತ ಸಮಿತಿ ಕರೆ ನೀಡಿದ ಭಾಗವಾಗಿ ಕಲ್ಬುರ್ಗಿ ಯಲ್ಲಿ ನೂರಾರು ವಿದ್ಯಾರ್ಥಿಗಳು ಈ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಸ್‌ಎಫ್ಐ ನ ಜಿಲ್ಲಾ ಕಾರ್ಯದರ್ಶಿ ಸುಜಾತಾ ವೈ ಮಾತನಾಡಿ, “ಕ್ಯಾಂಪಸ್‌ನಲ್ಲಿ ನಾವು ಸುರಕ್ಷಿತವಾಗಿಲ್ಲದಿದ್ದರೆ, ಇನ್ನೆಲ್ಲಿ ನಾವು ಸುರಕ್ಷಿತ?” ಎಂದು ಪ್ರಶ್ನಿಸಿದರು. ಕಲ್ಬುರ್ಗಿ
ಬಿಜೆಪಿ ಮತ್ತು ಟಿಎಂಸಿ ಮಾದರಿಯ ಶಿಕ್ಷಣ ಸಂಸ್ಥೆಗಳು ಸುರಕ್ಷತೆ ಮತ್ತು ಭದ್ರತೆಯ ಕೊರತೆಯಿರುವ ಸ್ಥಳಗಳಾಗುತ್ತಿವೆ, ಅಲ್ಲಿ ಬದುಕುಳಿದ ಬಲಿಪಶುಗಳು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ ಮತ್ತು ಅಪರಾಧಿಗಳನ್ನು ರಕ್ಷಿಸಲಾಗುತ್ತಿದೆ.ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಮನುಸ್ಮೃತಿ ವಿಚಾರಗಳನ್ನು ಅಳವಡಿಸುವ ಮತ್ತು ಜಾರಿ ಮಾಡಲು ಮುಂದಾಗುತ್ತಿವೆ. ಇದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ವಿರೋಧಿಸುತ್ತದೆ ಎಂದರು.
ಮೋದಿ ಸರ್ಕಾರದಲ್ಲಿ ಪ್ರಸ್ತುತ ಆಡಳಿತದಲ್ಲಿ ದೇಶಾದ್ಯಂತ ಕ್ಯಾಂಪಸ್‌ಗಳಲ್ಲಿ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯಗಳು ಸಾಮಾನ್ಯ ಸಂಗತಿಗಳಾಗಿವೆ. ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ಕಾಲೇಜಿನ ಇಬ್ಬರು ಉಪನ್ಯಾಸಕರು ವಿದ್ಯಾರ್ಥಿನಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಿದರು. ಕಲ್ಬುರ್ಗಿ
ಅಪರಾಧಿಗಳನ್ನು ಈಗಾಗಲೇ ಬಂದಿಸಲಾಗಿದೆ. ಆದರೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲು ಸರಿಯಾದ ತನಿಖೆಯನ್ನು ಮಾಡಬೇಕಿದೆ. ಸರಿಯಾದ ತನಿಖೆ ನಡೆಸದಿದ್ದರೆ ಆರೋಪಿಗಳು ತಪ್ಪಿಸಿ ಕೊಳ್ಳುವ ಸಾಧ್ಯತೆ ಇರುತ್ತದೆ. ಆದರಿಂದ ಆರೋಪಿಗಳಿಗೆ ಶಿಕ್ಷೆಯಾಗುವಂತೆ ತನಿಖೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ.
ಇದನ್ನೂ ಓದಿ: ಒಬಿಸಿ ಗಳಿಗೆ ಮೀಸಲಾತಿ ಶೇ.23ರಿಂದ ಶೇ.42ಕ್ಕೆ ಏರಿಕೆ: ಎ. ರೇವಂತ ರೆಡ್ಡಿ
ರಾಜ್ಯದ ಶಾಲಾ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಾಗುತ್ತಿವೆ. ಎಲ್ಲಾ ಶಾಲೆ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.
ಒಡಿಶಾದ ಫಕೀರ್ ಮೋಹನ್ ಕಾಲೇಜಿನಲ್ಲಿ ಇತ್ತೀಚೆಗೆ ಕ್ಯಾಂಪಸ್‌ನೊಳಗೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯು ಕ್ಯಾಂಪಸ್‌ಗಳಲ್ಲಿನ ಸುರಕ್ಷತೆ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ. ಪಶ್ಚಿಮ ಬಂಗಾಳದ ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಕಾಲೇಜಿನ ಯೂನಿಯನ್ ಕಚೇರಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂಬುದು ಎಸ್‌ಎಫ್‌ಐ ಆರೋಪಿಸಿದೆ.
ಮಹಾರಾಷ್ಟ್ರದ ಥಾಣೆಯಲ್ಲಿರುವ ಶಾಲೆಯೊಳಗೆ, ಬೆರಳಚ್ಚುಗಳ ರೂಪದಲ್ಲಿ ಒಪ್ಪಿಗೆ ಪಡೆದ ನಂತರ, ಮುಟ್ಟಿನ ತಪಾಸಣೆಗಾಗಿ ವಿದ್ಯಾರ್ಥಿನಿಯರನ್ನು ಬಲವಂತವಾಗಿ ವಿವಸ್ತ್ರಗೊಳಿಸಲಾಯಿತು. ಈ ಘಟನೆಗಳ ತೀವ್ರವಾಗಿ ವಿರೋಧ ವ್ಯಕ್ತವಾದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತವಾಗಿ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರತಿಭಟನೆಕಾರರು ಆಕ್ರೋಶವ್ಯಕ್ತಪಡಿಸಿದರು.
ಅಪರಾಧಿಗಳ ವಿರುದ್ಧ ದೂರು ದಾಖಲಿಸಿದ ನಂತರವೂ ಫಕೀರ್ ಮೋಹನ್ ಕಾಲೇಜಿನಲ್ಲಿ ಬಲಿಪಶು ತೀವ್ರವಾದ ಸುಟ್ಟಗಾಯಗಳಿಗೆ ಒಳಗಾಗಿ ಆಕೆಯ ಜೀವವನ್ನು ಬಲಿ ತೆಗೆದುಕೊಂಡಿದ್ದರೂ ಸಹ ಅಪರಾಧಿಗಳ ವಿರುದ್ಧ ದೂರು ದಾಖಲಿಸಿದ ನಂತರವೂ ಆರೋಪಿಯನ್ನು ರಕ್ಷಿಸುವ ಮೂಲಕ ಸರ್ಕಾರ ಆರೋಪಿಯ ಪರವಾಗಿ ನಿಂತಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ.

ಪಶ್ಚಿಮ ಬಂಗಾಳದ ಕ್ಯಾಂಪಸ್‌ಗಳ ಒಳಗೆ ಟಿಎಂಸಿ ಸ್ಥಾಪಿಸಿರುವ ಯೂನಿಯನ್ ಕಚೇರಿಗಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಹಿಂಸೆಯನ್ನು ನೀಡಲು ನಿರ್ದಿಷ್ಟವಾಗಿ ಸ್ಥಾಪಿಸಲಾಗಿದೆಯೇ ಎಂಬ ಪ್ರೆಶ್ನೆ ಉದ್ಭವವಾಗಿದೆ.
ಪಿತೃಪ್ರಭುತ್ವವನ್ನು (ಪುರುಷ ಪ್ರಧಾನ) ನಾಶಮಾಡಬೇಕು, ಕ್ಯಾಂಪಸ್ ಗಳಲ್ಲಿ GSCASH( GENDER AENSITIZATION COMMITTEE AGAINST SEXUAL HARASSMENT) ಅನ್ನು ಖಚಿತಪಡಿಸಬೇಕು, ಶಿಕ್ಷಣ ಸಂಸ್ಥೆಗಳಲ್ಲಿ ಸಂಘಗಳನ್ನು ಖಚಿತಪಡಿಸಿಕೊಳ್ಳಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ತೊಂದರೆ ನೀಡುವ ಅಪರಾಧಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಹಲವು ವಿವಿಧ ಬೇಡಿಕೆಗಳೊಂದಿಗೆ ಮನವಿ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಉಪಾದಕ್ಷ್ಯರಾದ ಪ್ರೇಮ್, ಜಿಲ್ಲಾ ಸಮಿತಿ ಸದಸ್ಯರಾದ ಹುಲಗಮ್ಮ, ಮಾಲಾಶ್ರೀ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದರು.
ಇದನ್ನೂ ನೋಡಿ: ದೇವನಹಳ್ಳಿ | ಅನ್ನ ಕೊಡೋ ರೈತರ ಬಾಯಿಗೆ ಮಣ್ಣು ಹಾಕ್ತೀರಾ ಸಿದ್ರಾಮಯ್ಯನವರೇ.? | ಗ್ರೌಂಡ್ ರಿಪೋರ್ಟ್Janashakthi
