ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ದ.ಕ. ಬಂದ್ ಗೆ ಕರೆ ನೀಡಿದ್ದ ಪ್ರಕರಣದಲ್ಲಿ ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಮೇ 1ರಂದು ಕೊಲೆಯಾಗಿದ್ದ ಸುಹಾಸ್ ಶೆಟ್ಟಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂಟಿಕಾನದಲ್ಲಿರುವ ಎಜೆ ಆಸ್ಪತ್ರೆಯ ಶವಾಗಾರದಲ್ಲಿರಿಸಿದ ವೇಳೆ ಆಸ್ಪತ್ರೆಯ ಆವರಣದ ಹೊರಗೆ ಶರಣ್ ಪಂಪ್‌ವೆಲ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ನಾಯಕ
ವಿಶ್ವ ಹಿಂದೂ ಪರಿಷತ್ ಮತ್ತು ಇತರ ಸಂಘಪರಿವಾರ ಗುಂಪುಗಳು ಮೇ 2 ರಂದು ಬೆಳಿಗ್ಗೆ 6:00 ರಿಂದ ಸಂಜೆ 6:00 ರವರೆಗೆ ಜಿಲ್ಲೆಯಾದ್ಯಂತ ಬಂದ್ ಆಚರಿಸುವುದಾಗಿ ಅವರು ಘೋಷಿಸಿ, ಸಾರ್ವಜನಿಕರು ಅಂಗಡಿಗಳು, ಕಚೇರಿಗಳು ಮತ್ತು ಇತರ ಸಂಸ್ಥೆಗಳನ್ನು ಮುಚ್ಚಿ ಪ್ರತಿಭಟನೆ ನಡೆಸುವಂತೆ ಕೇಳಿಕೊಂಡಿದ್ದರು.
ಇದನ್ನೂ ಓದಿ: ಕಾವೇರಿ ಜೆಟ್ ಇಂಜಿನ್ ರಷ್ಯಾದಲ್ಲಿ ಪರೀಕ್ಷೆ: ಭಾರತೀಯ ಯುದ್ಧ ಡ್ರೋನ್‌ಗಳಿಗೆ ಶಕ್ತಿ ತುಂಬಲು ಮಹತ್ವದ ಹೆಜ್ಜೆ
ಸಾರ್ವಜನಿಕರು ಬಂದ್‌ಗೆ ಸ್ಪಂದಿಸದಿದ್ದಾಗ, ಶರಣ್ ಪಂಪ್‌ವೆಲ್ ಹೇಳಿಕೆಯಿಂದ ಪ್ರಚೋದಿಸಲ್ಪಟ್ಟರು ಎಂದು ಹೇಳಲಾದ ಅವರ ಹಿಂಬಾಲಕರು ಮಂಗಳೂರಿನ ವಿವಿಧ ಭಾಗಗಳಲ್ಲಿ ಅಶಾಂತಿಯನ್ನು ಸೃಷ್ಟಿಸಿದರು. ಇದು ಸಾರ್ವಜನಿಕ ಆಸ್ತಿಗೆ ಹಾನಿ, ಕೋಮು ಉದ್ವಿಗ್ನತೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿತ್ತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಶರಣ್ ಪಂಪ್‌ವೆಲ್ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 49, 196(1), 324(2), 324(4), 324(5), ಮತ್ತು 353(2) ನಂತೆ ಪ್ರಕರಣ ದಾಖಲಾಗಿತ್ತು.
ತನಿಖೆಯ ಸಮಯದಲ್ಲಿ, ಅಗತ್ಯ ಪುರಾವೆಗಳನ್ನು ಸಂಗ್ರಹಿಸಿ ವಿಚಾರಣೆಗೆ ಹಾಜರಾಗುವಂತೆ ಬಿಎನ್‌ಎಸ್‌ಎಸ್ ಅಡಿಯಲ್ಲಿ ಆರೋಪಿಗೆ ಎರಡು ನೋಟಿಸ್‌ಗಳನ್ನು ಕಳುಹಿಸಲಾಗಿದ್ದರೂ ಆತ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸರ ಪ್ರಕಟನೆ ತಿಳಿಸಿದೆ.
ಇದನ್ನೂ ನೋಡಿ: ಫ್ಯಾಸಿಸಂ ವಿರುದ್ಧ ವಿಜಯದ 80 ವರ್ಷಗಳ ನಂತರ ಈಗ ಅದನ್ನು ಯಾಕೆ ನೆನಪಿಸಿಕೊಳ್ಳಬೇಕು ?