ಮಹಿಳೆಯರ ಬಗ್ಗೆ ಗೌರವವಿದ್ದರೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಭೇಟಿ ಮಾಡಿ; ಡಿಕೆ ಶಿವಕುಮಾರ್

ಯಾದಗಿರಿ:ಬಿಜೆಪಿ-ಜೆಡಿಎಸ್’ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದು, ಮಹಿಳೆಯರ ಬಗ್ಗೆ ಗೌರವವಿದ್ದರೆ ಲೈಂಗಿಕ ದೌರ್ಜನ್ಯ ಸಂತ್ರಸ್ತರ ಭೇಟಿ ಮಾಡಿ ಎಂದು ಅವರು ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಡಿಕೆಶಿ, ಕುಮಾರಸ್ವಾಮಿಯವರು ನಾರಿ ಶಕ್ತಿ ಬಗ್ಗೆ ತಂದೆ ತಾಯಿ ಬಗ್ಗೆ ಬಹಳ ಗೌರವಿದೆ. ಹೆಣ್ಣುಮಕ್ಕಳಿಗೆ ಗೌರವ ಇದೆ ಅಂತ ಹೇಳುತ್ತಾರಲ್ಲ. ಹಾಗಾದರೆ ಮೊದಲು ಹೋಗಿ ಆ ತಾಯಂದಿರಿಗೆ ಧೈರ್ಯ ಹೇಳುವ ಹಾಗೂ ಸಾಂತ್ವನ ತುಂಬುವಂತ ಕೆಲಸವನ್ನು ಬಿಜೆಪಿಯವರು ಹಾಗೂ ಜನತಾದಳದವರು ಮಾಡಲಿ ಎಂದು ಟಾಂಗ್ ಕೊಟ್ಟರು.

ಇದನ್ನು ಓದಿ : 7ದಿನಗಳ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ವಿಡಿಯೋಗಳಿರುವ ಪೆನ್‌ಡ್ರೈವ್ ಹಿಂದೆ ಮಹಾನಾಯಕರ ಕೈವಾಡವಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಪ್ರತಿಕ್ರಿಯಿಸಿ, ದೇವರಾಜೇಗೌಡ ಯಾರ್ಯಾರನ್ನು ಭೇಟಿಯಾಗಿದ್ದಾರೆ ಎಂದು ಗೊತ್ತಿದೆ. ಮುಂಚಿತವಾಗಿಯೇ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ರಾಜಕೀಯ ಮಾಡೋದಾದರೆ ಏನು ಬೇಕಾದರೂ ಮಾಡುತ್ತಿದ್ದೆವು. ನಾನು ಏನು ಮಾಡಬೇಕು ಅನ್ನೋದು ನನಗೂ ಗೊತ್ತಿದೆ ಎಂದು ಹೇಳಿದರು.

ಸೂರಜ್ ರೇವಣ್ಣ ಅವರನ್ನು ಭೇಟಿ ಮಾಡಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಹೌದು, ಅವರು ನನ್ನನ್ನು ಭೇಟಿ ಮಾಡಿದ್ದರು, ನನ್ನನ್ನು ಏಕೆ ಭೇಟಿ ಮಾಡಿದ್ದಾರೆ ಎಂದು ನೀವು ಅವರನ್ನೇ ಕೇಳಬಹುದು ಎಂದರು.

ಇದನ್ನು ನೋಡಿ : ಪೆನ್‌ಡ್ರೈವ್‌ ಪ್ರಕರಣ : ವಿಡಿಯೋ ಲೀಕ್ ಹಿಂದಿನ ಉದ್ದೇಶ ಬಿಚ್ಚಿಟ್ಟ ಪ್ರಜ್ವಲ್ ಮಾಜಿ ಡ್ರೈವರ್ Janashakthi Media

Donate Janashakthi Media

Leave a Reply

Your email address will not be published. Required fields are marked *