ಬಿಜೆಪಿ ವಿರುದ್ಧ ಮತ ಚಲಾಯಿಸಲು ಕಟ್ಟಡ ಕಾರ್ಮಿಕರ ನಿರ್ಧಾರ

ಬೆಂಗಳೂರು : 1996ರಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಸದುದ್ದೇಶದಿಂದ ಜಾರಿಗೆ ತರಲಾಗಿದ್ದ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ ಮತ್ತು ಸೆಸ್ ಕಾಯ್ದೆಗಳನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರವು ರದ್ದು ಮಾಡಿದೆ.  ಈ ಹಿನ್ನೆಲೆಯಲ್ಲಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಸೋಲಿಸಲು ಕಟ್ಟಡ ಕಾರ್ಮಿಕರು ನಿರ್ಧರಿಸಿದ್ದಾರೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಹೇಳಿದರು.

ಶುಕ್ರವಾರ ಫ್ರೀಡಂಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಪೋಸ್ಟರ್ ಮತ್ತು ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿಜೆಪಿ ಪಕ್ಷವು ಕಟ್ಟಡ ಕಾರ್ಮಿಕರ ಹಣವನ್ನು ಇತರರೆ ಕೆಲಸಗಳಿಗೆ ಬಳಕೆ ಮಾಡಲಾಗಿತ್ತು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಲಕಟ್ಟಡ ಕಾರ್ಮಿಕರ ಹಿತ ಕಾಣುವುದಿಲ್ಲ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ಬಿಜೆಪಿ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಹರೀಶ್ ಮಾತನಾಡಿ, ‘ಸಿಐಟಿಯು ಕಾರ್ಯಕರ್ತರು ಮನೆ-ಮನೆಗಳಿಗೆ ತೆರಳಿ ಕಟ್ಟಡ ಕಾರ್ಮಿಕರು ಮತ್ತು ಸಾರ್ವಜನಿಕರ ನಡುವೆ ಪ್ರಚಾರ ನಡೆಸಿ, ನರೇಂದ್ರ ಮೋದಿ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಗಳಿಂದ ಕಾರ್ಮಿಕ ವರ್ಗದ ಮೇಲೆ ಉಂಟುಮಾಡಿದ ದುಷ್ಪರಿಣಾಮಗಳನ್ನು ಮನವರಿಕೆ ಮಾಡಿಕೊಡಲಿದ್ದಾರೆ’  ಕರ್ನಾಟಕದಲ್ಲಿ ಸುಮಾರು 30 ಲಕ್ಷಕ್ಕೂ ಅಧಿಕ ನಿರ್ಮಾಣ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಮತಗಳನ್ನು ಚಲಾಯಿಸುವ ಅವಕಾಶ ಪಡೆದಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಕಾರ್ಮಿಕ ಹಕ್ಕುಗಳನ್ನು ದಮನ ಮಾಡುವುದು, ಹಾಲಿ ಇರುವ ಕಾನೂನುಗಳನ್ನು ತೆಗೆದು ಹಾಕುವ ಪ್ರಯತ್ನಗಳನ್ನು ಈ ಅವಧಿಯಲ್ಲಿ ನಡೆಸಿದ್ದಾರೆ ಇಂತಹ ಸನ್ನಿವೇಶದಲ್ಲೇ ಮತ್ತೆ ಅಧಿಕಾರಕ್ಕೆ ಮರಳಲು ಬಿಜೆಪಿ ಸಕಲ ಪ್ರಯತ್ನಗಳನ್ನು ನಡೆಸಿದೆ. ಹಾಗಾಗಿ ಬಿಜೆಪಿ ವಿರುದ್ಧ ಮತ ಚಲಾಯಿಸುವುದಾಗಿ ಹೇಳಿದರು.

ಇದನ್ನು ಓದಿ : ಸಂಘಪರಿವಾರದ ಸಮವಸ್ತ್ರದಲ್ಲೇ ಕಾಂಗ್ರೆಸ್‌ ಸೇರಿದ ಕಾರ್ಯಕರ್ತ

‘ಕಟ್ಟಡ ಕಾರ್ಮಿಕ ಕಾಯ್ದೆ ಅನುಸರಿಸಿ ಎಲ್ಲ ರಾಜ್ಯಗಳಲ್ಲಿ ಸ್ಥಾಪಿಸಲಾದ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗಳನ್ನು ಕೇಂದ್ರ ಸರ್ಕಾರದ ಅಡಿಯಲ್ಲಿ ತಂದು ಒಂದೇ ಕೇಂದ್ರ ಮಂಡಳಿಯನ್ನು ರಚಿಸಲು ತೀರ್ಮಾನಿಸಿದೆ. ಜತೆಗೆ 10 ಲಕ್ಷ ರೂಪಾಯಿ ಮೇಲ್ಪಟ್ಟ ಮೌಲ್ಯದ ಯಾವುದೇ ನಿರ್ಮಾಣ ಕಾಮಗಾರಿಗಳ ಮೇಲೆ ವಿಧಿಸಲಾಗುತ್ತಿದ್ದ ಸೆಸ್ ಮಿತಿಯನ್ನು, ಇದೀಗ 50 ಲಕ್ಷ ರೂಪಾಯಿ ಮೇಲ್ಪಟ್ಟ ಮೌಲ್ಯ ಎಂದು ತಿದ್ದುಪಡಿ ಮಾಡಲಾಗಿದೆ. ಇದರಿಂದ ಸೆಸ್ ಸಂಗ್ರಹ ಕಡಿಮೆಯಾಗಲಿದೆ, ಇದು ಕಟ್ಟಡ ಕಾರ್ಮಿಕರಿಗೆ ಮೋದಿ ಸರ್ಕಾರವು ಮಾಡಿರುವ ದ್ರೋಹ’ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಲಿಂಗರಾಜು ಹೇಳಿದರು.

ಮುಂದುವರಿದು, ‘ಕಟ್ಟಡ ನಿರ್ಮಾಣ ಸಾಮಗ್ರಿಗಳ ಮೇಲೆ ಹೆಚ್ಚಿನ ಜಿಎಸ್ ಟಿ ವಿಧಿಸಿದ್ದರಿಂದಾಗಿ ನಿರ್ಮಾಣ ಕಾಮಗಾರಿಗಳು ಕುಂಠಿತವಾಗಿ ಉದ್ಯೋಗ ನಾಶವಾಗಿವೆ. ದೇಶದ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಯುದ್ಧಕೋರ ಇಸ್ರೇಲ್ ದೇಶಕ್ಕೆ ಕಳುಹಿಸಿಕೊಡಲು ಒಪ್ಪಂದ ಮಾಡಿಕೊಳ್ಳಲಾಗಿದೆ, ಇದು ಅಕ್ಷಮ್ಯ’ ಎಂದರು.

‘ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆಗಳ ವಿರುದ್ಧ ಬೃಹತ್ ಪ್ರತಿಭಟನೆ, ಸಹಿ ಸಂಗ್ರಹ ಚಳುವಳಿಗಳನ್ನು ನಡೆಸಿದರೂ ಸರ್ಕಾರ ಕನಿಷ್ಟ ಮಾತುಕತೆಯನ್ನೂ ನಡೆಸಲಿಲ್ಲ. ಆದ್ದರಿಂದ ಕಾರ್ಮಿಕ ವರ್ಗದ ‘ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಿ’ ಎಂದು ಪ್ರಚಾರ ಮಾಡಲಿದ್ದೇವೆ’ ಎಂದು ಕಟ್ಟಡ ಕಾರ್ಮಿಕರ ಮುಖಂಡ ಎನ್.ಬಿ.ಮಹಾಂತೇಶ್ ಹೇಳಿದರು.

ಇದನ್ನು ನೋಡಿ : ರೈತ ಸಮುದಾಯವನ್ನು ಹಿಂಡಿ ಹಿಪ್ಪೆ ಮಾಡಿದ ಬಿಜೆಪಿಗೆ ರೈತರು ಓಟು ಹಾಕುವುದಿಲ್ಲ Janashakthi Media

Donate Janashakthi Media

Leave a Reply

Your email address will not be published. Required fields are marked *