ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಮೃತಪಟ್ಟ 82ರ ವೃದ್ಧೆ

ರಾಯಚೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬ್ಯಾಲೆಟ್ ಪೇಪರ್ ಮೂಲಕ ಮನೆಯಿಂದಲೇ ಮತದಾನ ಮಾಡಿದ ನಂತರ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.

ಮೃತ ವೃದ್ಧೆ ಅಲಬನೂರು ಗ್ರಾಮದ 82 ವರ್ಷದ ಮಂಗಮ್ಮ ಎಂದು ತಿಳಿದುಬಂದಿದೆ. ಮಂಗಮ್ಮ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು.

ಇದನ್ನೂ ಓದಿಜನಮತ 2023 : ಮನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭ, ಮೊದಲ ವೋಟ್‌ ಮಾಡಿದ ಹಿರಿಯ ನಟಿ ಲೀಲಾವತಿ

ಈ ಬಾರಿ ಚುನಾವಣಾ ಆಯೋಗ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಟ್ಟಿತ್ತು. ಅದರಂತೆ ನಿನ್ನೆ ಮಂಗಮ್ಮ ಅವರ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿದ್ದರು. ಮಂಗಮ್ಮ ಅವರ ಮನೆಗೆ ಪಿಆರ್​ಒ ದಿನೇಶ ಕೆಪಿ ಹಾಗೂ ಎಪಿಆರ್​​ಒ ಬಸಪ್ಪ ಹೆಚ್ ಹಾಗೂ ಇತರ ಸಿಬ್ಬಂದಿ ತೆರಳಿದ್ದರು. 349 ಸಂಖ್ಯೆಯ ಮತಪತ್ರವನ್ನು ಮಂಗಮ್ಮ ಅವರಿಗೆ ನೀಡಲಾಗಿತ್ತು. ಮಧ್ಯಾಹ್ನ ಸುಮಾರು 12.19ರ ವೇಳೆಗೆ ಮಂಗಮ್ಮ ಮತದಾನ ಮಾಡಿದ್ದು ನಂತರ ಮಧ್ಯಾಹ್ನ 12.50ಕ್ಕೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ಅಯೋಗದ ಸಿಬ್ಬಂದಿ ಅವರ ಮನೆ ಬಾಗಿಲಿಗೆ ತೆರಳಿ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಮತದಾನದ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಗುತ್ತದೆ. ಮತದಾನದ ನಂತರ ಮತ ಪೆಟ್ಟಿಗೆಗಳನ್ನು ಈಗಾಗಲೇ ಮೀಸಲಿಟ್ಟಿರುವ ಸ್ಟ್ರಾಂಗ್ ರೂಮ್​​ಗೆ ಶಿಪ್ಟ್ ಮಾಡಲಾಗುತ್ತದೆ. ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಲಾಗುತ್ತದೆ.

Donate Janashakthi Media

Leave a Reply

Your email address will not be published. Required fields are marked *