ದಾವಣಗೆರೆ ಉಪಚುನಾವಣೆಗೆ ಶಾಕ್: ಜಮೀರ್ ಆಡಿಯೋ ವೈರಲ್ – ‘ಕಾಂಗ್ರೆಸ್‌ಗೆ ಕಡಿಮೆ ಓಟ್ ಹಾಕಿ’ ಸೂಚನೆ?

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಸಂಬಂಧ, ಜೂನ್‌ 3ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ. ಇದೇ ಸಂದರ್ಭದಲ್ಲಿ ಹತ್ತು ಜನರಿಗೆ ಸಂಪುಟದಲ್ಲಿ ಆರಂಭಿಕ ಅವಕಾಶ ಸಿಗಲಿದೆ. ಜಮೀರ್ ಅಹ್ಮದ್ ಖಾನ್ ಕೂಡಾ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಇದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಜಮೀರ್ ರದ್ದು ಎನ್ನಲಾಗಿರುವ ಆಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಶಾಕ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಮೀರ್ ಅಂತರ ಕಾಯ್ದುಕೊಂಡಿದ್ದರು. ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುದು ಅವರ ಬೇಡಿಕೆ ಆಗಿತ್ತು. ಆದರೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಗೆ ಟಿಕೆಟ್ ನೀಡಲಾಗಿತ್ತು. ಶಾಕ್

ಇದರಿಂದ ಅಸಮಾಧಾನಗೊಂಡಿದ್ದ ಜಮೀರ್ ಬಣ ಪ್ರಚಾರದಿಂದ ದೂರ ಉಳಿದಿತ್ತು. ಸಂಧಾನ ಪ್ರಯತ್ನ ನಡೆದರೂ ಅದಕ್ಕೆ ಸಮ್ಮತಿ ಸಿಕ್ಕಿರಲಿಲ್ಲ. ಕೊನೆಗೂ ಸಿದ್ದರಾಮಯ್ಯ ಸೂಚನೆಯಂತೆ ಜಮೀರ್ ಎಸ್ ಎಸ್ ಮಲ್ಲಿಕಾರ್ಜುನ ಹಾಗೂ ಸಮರ್ಥ್ ಅವರ ಮನೆಗೆ ಭೇಟಿ ನೀಡಿದ್ದರು. ಆದರೆ ಸಕ್ರಿಯವಾಗಿ ಚುನಾವಣಾ ಪ್ರಚಾರ ನಡೆದಿರಲಿಲ್ಲ. ಶಾಕ್

ಇದನ್ನೂ ಓದಿ: ಅನ್ನಪೂರ್ಣ ಯೋಜನೆ ಡೇಟಾ ವಿವಾದ: ಕಲ್ಯಾಣವೇ ಅಥವಾ ನಿಗಾವ್ಯವಸ್ಥೆ?

ಹೀಗಿದ್ದರೂ ಸಮರ್ಥ್ ಗೆಲುವಾಗಿದೆ. ಇದರ ನಡುವೆ ಕಾಂಗ್ರೆಸ್ ಮುಸ್ಲಿಂ ನಾಯಕರ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿತ್ತು‌. ಸಲೀಂ ಅಹ್ಮದ್ ಮತ್ತು ರಿಜ್ವಾನ್ ಅರ್ಷದ್ ಸುದ್ದಿಗೋಷ್ಠಿ ನಡೆಸಿ ಪರೋಕ್ಷವಾಗಿ ಜಮೀರ್ ವಿರುದ್ಧ ಆರೋಪ ಮಾಡಿದ್ದರು. ಅಲ್ಲದೆ ಎಸ್ ಡಿಪಿಐ ಪರವಾಗಿ ಸಹಕಾರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಶಾಕ್

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿತ್ತು ಹಾಗೂ ಅಬ್ದುಲ್ ಜಬ್ಬಾರ್ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು‌.

ವೈರಲ್‌ ಆಡಿಯೋದಲ್ಲೇನಿದೆ?

ಈ ಎಲ್ಲಾ ಬೆಳವಣಿಗೆ ನಂತರದಲ್ಲಿ ಇದೀಗ ಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗುತ್ತಿದೆ. ʻದಾವಣಗೆರೆ ಬೈ ಎಲೆಕ್ಷನ್‌ನಲ್ಲಿ ಕುಕ್ಕರ್‌ಗೆ ವೋಟ್‌ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಸ್ಥಳೀಯ ಕಾಂಗ್ರೆಸ್ ನಾಯಕ ಮುಹಮ್ಮದ್ ಸಿರಾಜ್ ಎಂಬುವವರ ಜೊತೆಗೆ ಮಾತನಾಡಿದ ಆಡಿಯೋ ಇದಾಗಿದೆ ಎನ್ನಲಾಗಿದೆ. ಟ್ವೀಟ್ ಮೂಲಕ ಈ ಆಡಿಯೋವನ್ನು ಬಹಿರಂಗಗೊಳಿಸಲಾಗಿದೆ. ಸದ್ಯ ಈ ಆಡಿಯೋ ಎಲ್ಲೆಡೆ ಹರಿದಾಡುತ್ತಿದೆ. ದಾವಣಗೆರೆ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಇದು ಪೂರಕ ಎಂಬಂತಿದೆ‌.

ಜಮೀರ್‌ ಅಹ್ಮದ್‌ ಖಾನ್‌ರದ್ದು ಎನ್ನಲಾದ ಆಡಿಯೋದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಬದಲಾಗಿ ಮುಸ್ಲಿಮರೆಲ್ಲಾ ಪಕ್ಷೇತರರಿಗೆ ವೋಟ್‌ ಹಾಕಬೇಕು ಎಂದು ಆಗ್ರಹಿಸುವುದು ಸ್ಪಷ್ಟಗೊಳ್ಳುತ್ತಿದೆ. ಒಂದು ವೇಳೆ ಮುಸ್ಲಿಮರು ವೋಟ್‌ ಹಾಕಿಲ್ಲ ಅಂದ್ರೂ ಓಕೆ, ಅವನಿಗೆ ಕಾಂಗ್ರೆಸ್‌ ವೋಟ್‌ಗಳು ಮೈನಸ್‌ ಆಗಬೇಕು ಎಂದು ತಮ್ಮ ಬಂಟನಿಗೆ ಜಮೀರ್ ಸೂಚನೆ ನೀಡಿರುವುದು ಆಡಿಯೋದಲ್ಲಿದೆ.

ಅಷ್ಟೇ ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿಗೆ ಜಾಸ್ತಿ ಓಟ್ ಹಾಕಬೇಡಿ. ಬಂಡಾಯ ನಿಂತು ಕಣದಿಂದ ಹಿಂದೆ ಸರಿದಿದ್ದ ಸಾದಿಕ್ ಪೈಲ್ವಾನ್ ವಾರ್ಡ್ ನಲ್ಲಿ ಕಾಂಗ್ರೆಸ್ ಗೆ ಓಟ್ ಕಡಿಮೆ ಬರುವಂತೆ ನೋಡಿಕೊಳ್ಳಿ. ಜಾಸ್ತಿ ಹಾಕದೇ ಇರುವಂತೆ ನೋಡಿ. ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷೇತರರಿಗೆ ಮತ ಹಾಕಿಸಿ. ಬಲವಂತವಾಗಿ ಮನೆಯಿಂದ ಕರೆದು ಬಂದು ಓಟ್ ಹಾಕಿಸೇಡಿ ಎಂದು ಆಡಿಯೋದಲ್ಲಿದೆ.

ಇದನ್ನೂ ನೋಡಿ: ಬೆಂಗಳೂರಿನ ಸರಕಾರಿ ಶಾಲೆಗಳ ದುಸ್ಥಿತಿಗೆ ಯಾರು ಹೊಣೆ? – ಜಯರತ್ನ Janashakthi Media

Donate Janashakthi Media

Leave a Reply

Your email address will not be published. Required fields are marked *